ದ್ವಿಚಕ್ರ ವಾಹನ ಸವಾರನ ಮೇಲೆ ಮರದ ಕೊಂಬೆ ಬಿದ್ದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನಶಂಕರಿ ಬ್ರಹ್ಮ ಚೈತನ್ಯದ ಮಂದಿರದ ಬಳಿ ನಡೆದಿದೆ.
ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಮರದ ಕೊಂಬೆ ಬಿದ್ದಿದೆ. ಗಾಯಗೊಂಡಿದ್ದ ವ್ಯಕ್ತಿಯನ್ನು ಪ್ರಶಾಂತ್ ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ವ್ಯಕ್ತಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಶ್ರೀನಗರ ಮೂಲದವರು ಎನ್ನಲಾಗಿದೆ.