ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್ ಆಗಿದೆ. ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಷ ಮಾಡಲಾಗಿದೆ.
ಕೊಚ್ಚಿಯಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಪರಿಣಾಮ ವಿಮಾನವನ್ನು ನಾಗ್ಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ಇತ್ತ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ದೌಡಾಯಿಸಿದ್ದು, ಪರಿಶೀಲನೆ ಮುಂದುವರಿಸಿದ್ದಾರೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ, ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರನ್ನು ತೆರವುಗೊಳಿಸಲಾಗಿದ್ದು, ತಲಾಶ್ ಮುಂದುವರಿದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಾಗ್ಪುರ ವಿಮಾನ ನಿಲ್ದಾಣದಲ್ಲಿ ಬಿಗಿ ಬದ್ರತೆ ಕೈಗೊಳ್ಳಲಾಗಿದೆ.
ಏರಿಂಡಿಯಾದ ಮತ್ತೊಂದು ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಅಹಮದಾಬಾದ್ ನಿಂದ ಲಂಡನ್ ಗೆ ತೆರಳಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಎಐ 159 ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ತಪಾಸಣೆ ಮುಂದುವರಿದಿದೆ. ಮೊನ್ನೆಯಷ್ಟೇ ಇದೇ ಅಹಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಎದುರಾಗಿದೆ. ಮೊನ್ನೆಯಷ್ಟೇ 241 ಮಂದಿಯನ್ನು ಆಹುತ ಪಡೆದ ಕರಾಳ ಘಟನೆ ಮಾಸುವ ಮುನ್ನವೇ ಮತ್ತೊಮ್ಮೆ ಏರಿಂಡಿಯಾ ವಿಮಾನದಲ್ಲಿ ಲೋಪ ಕಾಣಿಸಿಕೊಂಡಿರೋದು ಆತಂಕಕ್ಕೆ ಕಾರಣವಾಗಿದೆ.