ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಬಿಜೆಪಿ ಮುಂದೆ ಹಲವು ಪ್ರಶ್ನೆಗಳನ್ನಿಟ್ಟ ಸಿಎಂ ಸಿದ್ದರಾಮಯ್ಯ!

June 17, 2025
Share on WhatsappShare on FacebookShare on Twitter

ಸಿಎಂ ಸಿದ್ದರಾಮಯ್ಯ ಅವರು ಇಂದು ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ, ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಮನವಿ ಮಾಡುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ. ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆ ಘಟನೆಯ ಹೊಣೆಯನ್ನು ನಾವು ಹೊತ್ತಿದ್ದೇವೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ. ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ್ದೇವೆ. ನನ್ನ ರಾಜಕೀಯ ಕಾರ್ಯದರ್ಶಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದೇನೆ. ಈ ಪ್ರಕರಣದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನೂ ರಚಿಸಿದ್ದೇವೆ.

ಕ್ರಮ ಕೈಗೊಂಡ ನಂತರವೂ ರಾಜ್ಯದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ದುರುದ್ದೇಶದಿಂದ ಹೊರತು ಜನರ ಬಗೆಗಿನ ಕಾಳಜಿಯಿಂದ ಅಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ. ಅಪಘಾತ, ಹತ್ಯೆ, ದೌರ್ಜನ್ಯಗಳು ನಡೆದ ತಕ್ಷಣ ಸತ್ತ ಜೀವಗಳನ್ನು ಹುಡುಕಿಕೊಂಡು ಹೋಗುವ ರಣಹದ್ದುಗಳಂತೆ ಎರಗಿ ಬೀಳುವುದು ಬಿಜೆಪಿಯ ರಕ್ತದಲ್ಲಿಯೇ ಇದೆ. ತಮ್ಮ ಊಟದೆಲೆಯ ಮೇಲೆ ಆನೆ ಸತ್ತುಬಿದ್ದಿದ್ದರೂ ಎದುರಿಗಿದ್ದವರ ಎಲೆ ಮೇಲೆ ಸತ್ತು ಬಿದ್ದ ನೊಣದ ಕಡೆ ಬೊಟ್ಟು ಮಾಡುವುದು ಬಿಜೆಪಿಯ ಹಳೆಯ ಚಾಳಿ ಎನ್ನುವುದನ್ನು ರಾಜ್ಯದ ಜನತೆ ಅರ್ಥಮಾಡಿಕೊಂಡಿದ್ದಾರೆ.
ಪ್ರತಿಯೊಂದು ಅಪಘಾತದ ಹಿಂದೆ ಸಾವು-ನೋವಿಗೆ ಈಡಾದವರ ಕುಟುಂಬದ ದು:ಖ ಮತ್ತು ಸಂಕಟ ಇರುವುದನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಇದೇ ಕಾರಣಕ್ಕಾಗಿ ನಾವು ಇಂತಹ ಪ್ರಕರಣಗಳನ್ನು ರಾಜಕೀಯಕ್ಕೆ ಬಳಸುವುದಿಲ್ಲ. ಹೀಗಿದ್ದರೂ ರಾಜ್ಯದ ಬಿಜೆಪಿ ನಾಯಕರು ಮತ್ತೆ ಮತ್ತೆ ಇಂತಹ ಪ್ರಕರಣಗಳನ್ನು ಕೆದಕಿ ಕೆದಕಿ ಜನರನ್ನು ಪ್ರಚೋದಿಸುತ್ತಿರುವ ಹಿನ್ನೆಲೆಯಲ್ಲಿ ಇವರ ಆತ್ಮವಂಚಕ ನಡವಳಿಕೆಯನ್ನು ಬಯಲು ಮಾಡುವ ಉದ್ದೇಶದಿಂದ ಬಿಜೆಪಿ ಆಡಳಿತದಲ್ಲಿನ ಕೆಲವು ಪ್ರಕರಣಗಳನ್ನು ರಾಜ್ಯದ ಜನತೆಯ ಗಮನಕ್ಕೆ ತರಲು ಇಷ್ಟಪಡುತ್ತೇನೆ.

2002ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆದ ಹತ್ಯಾಕಾಂಡದಲ್ಲಿ ಎಲ್ಲ ಧರ್ಮಗಳಿಗೆ ಸೇರಿದ್ದ ಅಂದಾಜು ಎರಡು ಸಾವಿರ ಅಮಾಯಕರು ಪ್ರಾಣ ಕಳೆದುಕೊಂಡರು. ಆ ಘಟನೆಯ ಹೊಣೆಹೊತ್ತು ರಾಜೀನಾಮೆ ನೀಡುವಂತೆ ಅವರದ್ದೇ ಪಕ್ಷದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸೂಚನೆ ನೀಡಿದರೂ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರು ರಾಜೀನಾಮೆ ನೀಡಿಲ್ಲ. ಮಾತ್ರವಲ್ಲ, ಇಲ್ಲಿಯ ವರೆಗೆ ಕನಿಷ್ಠ ವಿಷಾದವನ್ನೂ ಸೂಚಿಸಿಲ್ಲ. ನಮ್ಮ ರಾಜೀನಾಮೆ ಕೇಳುವವರು ಮೊದಲು ಇದಕ್ಕೆ ಉತ್ತರಿಸಿ.

ಕಳೆದ ಏಪ್ರಿಲ್ ತಿಂಗಳಲ್ಲಿ ಪಹಲ್ಗಾಮ್‌ನಲ್ಲಿ ಪಾಕ್ ಉಗ್ರಗಾಮಿಗಳು ನಡೆಸಿದ್ದ ಹತ್ಯಾಕಾಂಡದಲ್ಲಿ 26 ಭಾರತೀಯರು ಪ್ರಾಣ ಕಳೆದುಕೊಂಡರು. ಈ ಘಟನೆಯ ಹೊಣೆ ಹೊತ್ತು ಪ್ರಧಾನಿ ರಾಜೀನಾಮೆ ನೀಡಬೇಕೆಂದು ನಮ್ಮ ಪಕ್ಷ ಒತ್ತಾಯಿಸಿಲ್ಲ. ಈ ಘಟನೆಯ ಚರ್ಚೆಗೆ ಕನಿಷ್ಠ ಸಂಸತ್ ನ ವಿಶೇಷ ಅಧಿವೇಶನ ಕರೆಯಬೇಕೆಂಬ ನಮ್ಮ ಪಕ್ಷದ ಬೇಡಿಕೆಯನ್ನೂ ಪ್ರಧಾನಿಯವರು ಒಪ್ಪಿಕೊಂಡಿಲ್ಲ. ದೇಶಕ್ಕೆಲ್ಲ ಸಿಂಧೂರ ಹಂಚಲು ಹೊರಟಿರುವ ಪ್ರಧಾನಿಯವರಿಗೆ ಇಲ್ಲಿಯ ವರೆಗೆ 26 ಅಮಾಯಕರ ಸಾವಿಗೆ ಕಾರಣರಾದ ನಾಲ್ಕು ಮಂದಿ ದುರುಳರು ಯಾರು ಎನ್ನುವುದನ್ನು ಪತ್ತೆ ಹಚ್ಚಲಾಗಿಲ್ಲ. ಇದು ಕೇಂದ್ರ ಸರ್ಕಾರದ ವೈಫಲ್ಯ ಅಲ್ಲವೇ? ಈ ವೈಫಲ್ಯದ ಹೊಣೆಯನ್ನು ಯಾರು ಹೊರಬೇಕು? ಪಂಡಿತ ಜವಾಹರಲಾಲ್ ನೆಹರೂ ಅವರಾ? ರಾಹುಲ್ ಗಾಂಧಿಯವರಾ? ಇಲ್ಲವೇ ಪ್ರಧಾನಿ ನರೇಂದ್ರ ಮೋದಿಯವರೇ?

ಕಳೆದ ಎರಡು ವರ್ಷಗಳಿಂದ ದೇಶದ ಈಶಾನ್ಯ ಭಾಗದ ಮಣಿಪುರ ಹಿಂಸೆಯ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದೆ. ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಆ ರಾಜ್ಯದ ಬಿಜೆಪಿ ಮುಖ್ಯಮಂತ್ರಿ ಬಿರೇನ್ ಸಿಂಗ್ 20 ತಿಂಗಳ ಕಾಲ ಕುರ್ಚಿಗೆ ಅಂಟಿಕೂತಿದ್ದರು. ಕೊನೆಗೂ ಸುಪ್ರೀಂ ಕೋರ್ಟ್ ಚಾಟಿ ಬೀಸಿದ ನಂತರ ರಾಜೀನಾಮೆ ನೀಡಿದ್ದರು. ಈಗಲೂ ಅಲ್ಲಿ ಹಿಂಸಾಚಾರ ಮುಂದುವರಿದಿದೆ. ಇದರ ಹೊಣೆಯನ್ನು ಕೇಂದ್ರ ಗೃಹ ಸಚಿವರು ಹೊರುವುದು ಬೇಡವೇ?

ಗುಜರಾತ್ ನ ಮೋರ್ಬಿ ಸೇತುವೆ ಕುಸಿದು ಬಿದ್ದು 140 ಮಂದಿ ಮೃತಪಟ್ಟಿದ್ದರು. ಈ ವರ್ಷದ ಜನವರಿ ತಿಂಗಳಲ್ಲಿ ಮಹಾ ಕುಂಭಮೇಳದದಲ್ಲಿ 30 ಯಾತ್ರಿಕರು ಪ್ರಾಣ ಕಳೆದುಕೊಂಡರು. ಆ ರಾಜ್ಯಗಳಲ್ಲಿ ಮುಖ್ಯಮಂತ್ರಿಯಾಗಿರುವವರು ಬಿಜೆಪಿಗೆ ಸೇರಿದವರಲ್ಲವೇ? ಇವರು ರಾಜೀನಾಮೆ ನೀಡುವುದು ಬಿಡಿ, ಆ ಘಟನೆಗಳ ಬಗ್ಗೆ ಇಲ್ಲಿಯ ವರೆಗೆ ಸರಿಯಾದ ತನಿಖೆಯನ್ನೇ ಅಲ್ಲಿನ ಸರ್ಕಾರ ನಡೆಸಿಲ್ಲ. ಹೀಗಿರುವಾಗ ನಮ್ಮ ರಾಜೀನಾಮೆ ಕೇಳಲು ರಾಜ್ಯದ ಬಿಜೆಪಿ ನಾಯಕರಿಗೆ ಯಾವ ನೈತಿಕತೆ ಇದೆ?

ನಮ್ಮ ಸರ್ಕಾರ ರಾಜ್ಯದ ಏಳು ಕೋಟಿ ಜನರಿಗೆ ಉತ್ತರದಾಯಿಯಾಗಿದೆ. ಈ ಕಾರಣಕ್ಕಾಗಿ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಭ್ರಷ್ಟರಾಗಿದ್ದಾರೆಂದು ಮೇಲ್ನೋಟಕ್ಕೆ ಅನಿಸಿದವರ ವಿರುದ್ದ ಕ್ರಮಕೈಗೊಳ್ಳಲಾಗಿದೆ. ಉಳಿದಂತೆ ಇದರ ಬಗ್ಗೆ ಆಮೂಲಾಗ್ರವಾದ ಮತ್ತು ನಿಷ್ಪಕ್ಷಪಾತ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಲಾಗಿದೆ. ಆಯೋಗ ನೀಡುವ ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ದ ಯಾವುದೇ ಮುಲಾಜಿಲ್ಲದೆ ಕ್ರಮಕೈಗೊಳ್ಳಲಾಗುವುದು. ರಾಜ್ಯ ಬಿಜೆಪಿ ನಾಯಕರು ಇನ್ನಾದರೂ ಪ್ರತಿಭಟನೆಯಂತಹ ಬೀದಿ ಪ್ರಹಸನವನ್ನು ಕೈಬಿಟ್ಟು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಲಿ.

Tags: BJPChinnaswamy StadiumCongressSiddaramaiah
SendShareTweet
Previous Post

ಬಾಂಬ್ ಬೆದರಿಕೆ: ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್

Next Post

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?

Related Posts

ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ
ಬಳ್ಳಾರಿ

ನಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಸವಾಲಾಗಿದೆ; ಜಾರಕಿಹೊಳಿ

ಯೂನಿವರ್ಸಲ್ ಕರಾಟೆ ಯೂನಿಯನ್ ಘಟಕಕ್ಕೆ ಚಾಲನೆ
ಉಡುಪಿ

ಯೂನಿವರ್ಸಲ್ ಕರಾಟೆ ಯೂನಿಯನ್ ಘಟಕಕ್ಕೆ ಚಾಲನೆ

ಸಣ್ಣ ಉದ್ದಿಮೆದಾರರ ಮೇಲೆ ದೌರ್ಜನ್ಯ; ಸಿಡಿದೆದ್ದ ಕಾರ್ಮಿಕರು
ರಾಜ್ಯ

ಸಣ್ಣ ಉದ್ದಿಮೆದಾರರ ಮೇಲೆ ದೌರ್ಜನ್ಯ; ಸಿಡಿದೆದ್ದ ಕಾರ್ಮಿಕರು

ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು
ರಾಜ್ಯ

ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು

ಸರ್ಕಾರದ ವಿರುದ್ಧ ಮಾವು ಬೆಳೆಗಾರರ ಆಕ್ರೋಶ
ಕೋಲಾರ

ಸರ್ಕಾರದ ವಿರುದ್ಧ ಮಾವು ಬೆಳೆಗಾರರ ಆಕ್ರೋಶ

ಟೊಮೆಟೋ ಬೆಳೆದ ಅನ್ನದಾತ ಕಂಗಾಲು
ರಾಜ್ಯ

ಟೊಮೆಟೋ ಬೆಳೆದ ಅನ್ನದಾತ ಕಂಗಾಲು

Next Post
ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?

ತಪ್ಪಿದ ಮತ್ತೊಂದು ಪ್ರಮಾದ: ವಿಮಾನ ತುರ್ತು ಭೂ ಸ್ಪರ್ಶವಾಗಿದ್ದೇಕೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ

ನಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಸವಾಲಾಗಿದೆ; ಜಾರಕಿಹೊಳಿ

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

Recent News

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

ಬಿಜೆಪಿಯವರ ಯಡವಟ್ಟಿನಿಂದಾಗಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ: ಜಾರಕಿಹೊಳಿ

ನಮ್ಮ ಕುರ್ಚಿ ಉಳಿಸಿಕೊಳ್ಳುವುದೇ ಸವಾಲಾಗಿದೆ; ಜಾರಕಿಹೊಳಿ

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ನಿಯಮ ಉಲ್ಲಂಘಿಸಿದವರಿಗೆ ಶಾಕ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ಗಾರ್ಡನ್ ಸಿಟಿ ಆಗಲಿದೆಯಾ ಗಾರ್ಬೇಜ್ ಸಿಟಿ?

ನೂರಾರು ಮರಗಳು ಧರಾಶಾಹಿ!

ನೂರಾರು ಮರಗಳು ಧರಾಶಾಹಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat