ಇಂದಿನಿಂದ ರಾಜ್ಯದಲ್ಲಿ ಮಳೆ ಪ್ರಮಾಣ ಕುಗ್ಗಲಿದ್ದು, ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಒಂದು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಗೆ ಮಾತ್ರ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಯಾವ ಜಿಲ್ಲೆಗಳಲ್ಲೂ ಯಾವುದೇ ಅಲರ್ಟ್ ಇಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.