ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆಗಳ ಅನರ್ಹ ಫಲಾನುಭವಿಗಳ ಪಿಂಚಣಿ ರದ್ದಿಗೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳೇ ಭಾರವಾಗಿವೆ. ಈ ಹಿನ್ನೆಲೆಯಲ್ಲಿ ಸಂಪನ್ಮೂಲಗಳ ಕ್ರೋಢೀಕರಣಕ್ಕೆ ಸರ್ಕಾರ ಕಸರತ್ತು ನಡೆಸುತ್ತಿದೆ. ಈಗ ಪಿಂಚಣಿ ರದ್ದಿಗೆ ಮುಂದಾಗಿದೆ. ಅನರ್ಹ ಫಲಾನುಭವಿಗಳ ಪತ್ತೆಗೆ ಮುಂದಾಗಲಾಗಿದೆ. ರಾಜ್ಯದಲ್ಲಿ ವೃದ್ಧಾಪ್ಯ ವೇತನ ಯೋಜನೆಯಡಿ 21.87 ಲಕ್ಷ , ಸಂಧ್ಯಾ ಸುರಕ್ಷಾ 31.33 ಫಲಾನುಭವಿಗಳು ಇದ್ದಾರೆ.
9.04 ಲಕ್ಷ ವೃದ್ಧಾಪ್ಯ ವೇತನ, 14.15 ಲಕ್ಷ ಸಂಧ್ಯಾ ಸುರಕ್ಷಾ ಯೋಜನೆಯ ಫಲಾನುಭವಿಗಳು ಸುಳ್ಳು ದಾಖಲೆ ಸೃಷ್ಟಿಸಿ ಸೌಲಭ್ಯ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಪಿಂಚಣಿ ರದ್ಧಿಗೆ ಸರ್ಕಾರ ಸೂಚನೆ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆ ಸೂಚನೆ ನೀಡಿದೆ. ಹೀಗಾಗಿ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಫಲಾನುಭವಿಗಳಿಗೆ ಸದ್ಯದಲ್ಲೇ ಕತ್ತರಿ ಬೀಳಲಿದೆ.