ಚಿತ್ರದುರ್ಗ: ಜಿಲ್ಲಾಸ್ಪತ್ರೆಯ ಕರ್ಮಕಾಂಡದ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಸಿಟಿ ಸ್ಕ್ಯಾನ್ ಗೆ ಬರುವ ರೋಗಿಗಳಿಂದ ಸಿಬ್ಬಂದಿ ಲಂಚ ವಸೂಲಿ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ.
CT ಸ್ಕ್ಯಾನ್ ಸಿಬ್ಬಂದಿ 100 ರೂ. ಲಂಚ ಪಡೆಯುತ್ತಿದ್ದ ವೇಳೆ ಗವಿರಾವ್ ಎಂಬುವವರು ಲಂಚ ಪಡೆದಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.