ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ರೂಪಾಯಿ ವಂಚನೆ ಆರೋಪ ಕೇಳಿ ಬಂದಿದೆ.
ಮಾನ್ವಿ ಯುವಕ ಮೈನುದ್ದಿನ್ ಎಂಬುವವರಿಗೆ ವಂಚಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ಕೇಬಲ್ ಚಾನೆಲ್ ಸ್ಟುಡಿಯೋ ನಿರ್ಮಾಣಕ್ಕೆ ಹಣ ಪಡೆದು, ಕೆಲಸವನ್ನು ಅರ್ಧಕ್ಕೆ ನಿಲ್ಲಿಸಿ ವಂಚಿಸಿದ್ದಾರೆಂದು ಮೈನುದ್ದಿನ್ ಆರೋಪಿಸಿದ್ದಾರೆ.
ಸ್ಟುಡಿಯೋ ನಿರ್ಮಾಣ ಕೆಲಸಕ್ಕಾಗಿ 2017 ರಲ್ಲೇ ಗೋಲ್ಡ್ ಸುರೇಶ್ ಜೊತೆ 14 ಲಕ್ಷ ರೂ.ಗೆ ಅಗ್ರಿಮೆಂಟ್ ಮಾಡಲಾಗಿತ್ತು. ಪ್ರಾರಂಭದಲ್ಲಿ 4 ಲಕ್ಷ ರೂ. ಮುಂಗಡವಾಗಿ ನೀಡಲಾಗಿತ್ತು. ನಂತರ ಹಂತ ಹಂತವಾಗಿ 7 ಲಕ್ಷ ರೂಪಾಯಿ ನೀಡಿದ್ದೇನೆ ಎಂದು ಮೈನುದ್ದಿನ್ ಆರೋಪಿಸಿದ್ದಾರೆ.
2025ರ ಏಪ್ರಿಲ್ 29 ರಂದು ಸುರೇಶ್, ಮೈನುದ್ದಿನ್ ಸ್ನೇಹಿತ ಬಸವರಾಜ್ ಅವರ ಖಾತೆಗೆ 50 ಸಾವಿರ ರೂ. ವರ್ಗಾಯಿಸಿದ್ದಾರೆ. ಆದರೆ, ಇದುವರೆಗೂ ಸುಮಾರು 4 ಲಕ್ಷ ರೂ. ಪಾವತಿ ಮಾಡಿಲ್ಲ ಎನ್ನಲಾಗಿದೆ. ಬಾಕಿ ಹಣ ನೀಡುವ ಭರವಸೆ ನೀಡಿ ‘ಮುಂಬೈಗೆ ಬನ್ನಿ, ಹಣ ಕೊಡ್ತೀನಿ’ ಎಂದು ಲೊಕೇಶನ್ ಶೇರ್ ಮಾಡಿದ್ದರು. ಅಲ್ಲಿಯೂ ಹಣ ಪಾವತಿ ಮಾಡಿಲ್ಲ ಎಂದು ಮೈನುದ್ದಿನ್ ಆರೋಪಿಸಿದ್ದಾರೆ.