ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮಳೆಯ ಆರ್ಭಟ ಇಂದು ಕೊಂಚ ತಗ್ಗಿದೆ.
ಕೆಲವೆಡೆ ಮಳೆರಾಯ ರಜೆ ಪಡೆಯಲಿದ್ದು, ಸಂಕಷ್ಟದಲ್ಲಿದ್ದ ಜನರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇಂದು ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕಳೆದ ಒಂದು ವಾರದಿಂದ ಕರಾವಳಿ ಭಾಗದ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಬೀದರ್, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾವೇರಿ, ಬೆಳಗಾವಿ ಸೇರಿದಂತೆ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗುವ ಮುನ್ಸೂಚನೆ ಇದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.