ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್ ಐಟಿ ರಚಿಸಿತ್ತು. ಆದರೆ, ಈಗ ಹೈಕೋರ್ಟ್, ಎಸ್ ಐಟಿ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ರಾಜ್ಯ ಸರ್ಕಾರ ಎಸ್ ಐಟಿ ರಚಿಸಿರುವುದನ್ನು ಪ್ರಶ್ನಿಸಿ ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು. ವಾದ- ವಿವಾದ ಆಲಿಸಿದ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ರಾಜ್ಯ ಸರ್ಕಾರವು ಜನವರಿ ತಿಂಗಳಲ್ಲಿ ಎಸ್ ಐಟಿ ರಚನೆ ಮಾಡಿ ಆದೇಶ ಹೊರಡಿಸಿತ್ತು