ಕೇಂದ್ರ ಸರ್ಕಾರ ನಿಮಗೊಂದು ಗುಡ್ ನ್ಯೂಸ್ ಕೊಟ್ಟಿದೆ. ನಿರಾಳವಾಗಿ ಸಂಚಾರ ಮಾಡುವುದಕ್ಕೆ ಹೊಸ ಪ್ಲಾನ್ ವೊಂದನ್ನು ಪರಿಚಯಿಸುತ್ತಿದೆ. ಟೋಲ್ ನಲ್ಲಾಗುವ ಕೆಲವು ಕಿರಿ ಕಿರಿಗೆ ಬ್ರೇಕ್ ಹಾಕಲು ಫಾಸ್ಟ್ ಟ್ಯಾಗ್ ಆಧಾರಿತ ಪಾಸ್ ನ್ನು ಜಾರಿ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಸರ್ಕಾರವು 3 ಸಾವಿರ ರೂ. ಫಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಸೌಲಭ್ಯವನ್ನು ಪ್ರಾರಂಭಿಸುತ್ತಿದೆ . ಈ ಹೊಸ ರೂಲ್ಸ್ ಆಗಸ್ಟ್ 15 ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಹೆದ್ದಾರಿ ಖಾತೆಯ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಈ ಕುರಿತು ನಿತಿನ್ ಗಡ್ಕರಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಫಾಸ್ಟ್ ಟ್ಯಾಗ್ ಆಧರಿತ ವಾರ್ಷಿಕ ಪಾಸ್ ಬಗ್ಗೆ ವಿವರ ಹಂಚಿಕೊಂಡಿದ್ದಾರೆ. ಈ ಸೇವ ಪ್ರಕ್ರಿಯಗೊಳಿಸಿದ ದಿನಾಂಕದಿಂದ ಒಂದು ವರ್ಷ ಅಥವಾ 200 ಟ್ರಿಪ್ ಗಳವರೆಗೆ ಮಾನ್ಯವಾಗಿರುತ್ತದೆ. ಈ ಪಾಸ್ ನ್ನು ಕಾರುಗಳು, ಜೀಪ್ಗಳು ಮತ್ತು ವ್ಯಾನ್ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾಗಿದೆ.
ನವೀಕರಣಕ್ಕಾಗಿ ಮೀಸಲಾದ ಲಿಂಕ್ ನ್ನು ಶೀಘ್ರದಲ್ಲೇ ರಾಜ್ಮಾರ್ಗ್ ಯಾತ್ರಾ ಅಪ್ಲಿಕೇಶನ್ನಲ್ಲಿ ಹಾಗೂ NHAI ಮತ್ತು MoRTH ನ ಅಧಿಕೃತ ವೆಬ್ಸೈಟ್ಗಳಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತದೆ. ಈ ‘ವಾರ್ಷಿಕ ಪಾಸ್ನಿಂದ ಅನೇಕ ಲಾಭಗಳಿದ್ದು 60 ಕಿ.ಮೀ ವ್ಯಾಪ್ತಿಯೊಳಗೆ ಇರುವ ಟೋಲ್ ಪ್ಲಾಜಾಗಳಿಗೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆಗಳು ಪರಿಹಾರವಾಗಲಿದೆ.
ಈ ಪಾಸ್ ಅಡಿಯಲ್ಲಿ ಒಂದು ಟ್ರಿಪ್ಗೆ ಕೇವಲ 15 ರೂ. ಟೋಲ್ ಪಾವತಿಸಿದರೆ ಸಾಕಾಗುತ್ತದೆ. ಆದರೆ, ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಯಾವುದೇ ಟೋಲ್ ಪ್ಲಾಜಾದಲ್ಲಿ 100 ರಿಂದ 200 ರೂ. ಗಳವರೆಗಿನ ಟೋಲ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಹೀಗಾಗಿ ಇದು ಅನುಕೂಲವಾಗಲಿದೆ.