ಬೆಂಗಳೂರು: ಯುವಕನೋರ್ವ ಪಾರ್ಕ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.
ಹೆಣ್ಣೂರು ಬಳಿಯ ರಿಂಗ್ ರಸ್ತೆಯಲ್ಲಿರುವ ಪಾರ್ಕ್ ನಲ್ಲಿ ಈ ಘಟನೆ ನಡೆದಿದೆ. ಸುಮಿತ್ ಬಿಕೋ ಅಲಿಯಾಸ್ ತುಷಾಂತ್ (19) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಎನ್ನಲಾಗಿದೆ. ಮೆಟ್ರೋ ಕಾಮಗಾರಿ ನೋಡಿಕೊಳ್ಳುತ್ತಿದ್ದ ಮಾರ್ಷಲ್ ಒಬ್ಬರ ಮಗನಾಗಿರುವ ತುಶಾಂತ್ ನೇಪಾಳ ಮೂಲದವನು ಎನ್ನಲಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಈ ಘಟನೆ ಕಳೆದ ರಾತ್ರಿ ನಡೆದಿದೆ ಎನ್ನಲಾಗಿದೆ. ಬೆಳಗ್ಗೆ ಪಾರ್ಕ್ ಬಂದ ವೃದ್ಧರೊಬ್ಬರು ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಹೆಣ್ಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ ಮನೆಯಲ್ಲಿ ಜಗಳ ಮಾಡಿಕೊಂಡು ಬಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.