ಸರ್ಕಾರದ ಎಲ್ಲಾ ಇಲಾಖೆಗಳು ತನ್ನ ಆಡಳಿತದಲ್ಲಿ ಕಡ್ಡಾಯವಾಗಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಬಳಸಬೇಕು. ಕಚೇರಿಗಳ ನಾಮಫಲಕಗಳನ್ನು ಕನ್ನಡದಲ್ಲೇ ಪ್ರದರ್ಶಿಸಬೇಕ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸುತ್ತೋಲೆ ಹೊರಡಿಸಿದ್ದಾರೆ.
ಸರ್ಕಾರದ ಸೂಚನೆಯನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಕನ್ನಡ ಭಾಷೆಯಲ್ಲಿ ಆಡಳಿತ ನಡೆಸುವಂತೆ ಹಲವಾರು ಬಾರಿ ಸುತ್ತೋಲೆ ಹೊರಡಿಸಿದರೂ ಪಾಲನೆಯಾಗುತ್ತಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ವರದಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಎಲ್ಲ ಇಲಾಖೆಗಳು ಆಡಳಿತದಲ್ಲಿ ಸಂಪೂರ್ಣ ಕನ್ನಡ ಬಳಕೆಯ ನಿಯಮ ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಸರ್ಕಾರದ ಸುತ್ತೋಲೆಯಲ್ಲಿ ಏನಿದೆ
ಕನ್ನಡದಲ್ಲಿ ಬರುವ ಅರ್ಜಿಗಳಿಗೆ ಕನ್ನಡಲ್ಲೇ ಉತ್ತರಿಸಬೇಕು.
ವಿಧಾನ ಮಂಡಲ ಕಾರ್ಯಕಲಾಪ ಸೇರಿದಂತೆ ಪತ್ರ ವ್ಯವಹಾರಗಳನ್ನು ಕನ್ನಡದಲ್ಲೇ ನಿರ್ವಹಿಸಬೇಕು.
ನೇಮಕಾತಿ, ವರ್ಗಾವಣೆ, ರಜೆ ಮಂಜೂರಾತಿ ಸೇರಿದಂತೆ ಆದೇಶಗಳೆಲ್ಲ ಕನ್ನಡದಲ್ಲೇ ಇರಬೇಕು.
ಆಡಳಿತದಲ್ಲಿ ಭಾಷಾ ನೀತಿ ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಬೇಕು. ಇದು ನೌಕರಸ್ಥರ ಕರ್ತವ್ಯವಾಗಿರುತ್ತದೆ
ಇಲಾಖೆಗಳು ಆಡಳಿತದಲ್ಲಿ ಕನ್ನಡ ಬಳಕೆಯ ನಿಯಮ ಪಾಲಿಸಬೇಕು.


















