ಚಿಕ್ಕಮಗಳೂರು: ಸೆಪ್ಟೆಂಬರ್ ನಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾತನಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಯಾವುದೂ ಗೊತ್ತಿಲ್ಲ. ಕಂದಾಯ ಇಲಾಖೆಯಲ್ಲಿ ಬದಲಾವಣೆ ಮಾಡುವುದಷ್ಟೇ ನನಗೆ ಗೊತ್ತು. ಕಂದಾಯ ಇಲಾಖೆಯಲ್ಲಿ ಬದಲಾವಣೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ಹಾಗೂ ಪಕ್ಷೇ ಹೇಳಿದೆ. ಹೀಗಾಗಿ ಕಂದಾಯ ಇಲಾಖೆಯಲ್ಲಿ ಜನ ಪರವಾದ ಬದಲಾವಣೆ ಮಾಡುತ್ತಿದ್ದೇವೆ. ಅವರವರ ಹೇಳಿಕೆ ಅಭಿಪ್ರಾಯ ಹೇಳಲು ಪ್ರಜಾಪ್ರಭುತ್ವದಲ್ಲಿ ಸ್ವತಂತ್ರವಿದೆ. ಹೇಳುವವರು ಹೇಳುತ್ತಾರೆ. ನಮ್ಮ ಕೆಲಸ ನಾವು ಮಾಡಬೇಕು ಎಂದು ಹೇಳಿದ್ದಾರೆ.
ಯಾವುದೇ ಕೆಲಸದಲ್ಲಿ ಏಳು ಬೀಳುಗಳು ಹಾಗೂ ತೊಡಕುಗಳು ಇದ್ದೇ ಇರುತ್ತೇವೆ. ಅವುಗಳನ್ನು ದಾಟಿ ನಾವು ಕೆಲಸ ಮಾಡಬೇಕು ಎಂದಿದ್ದಾರೆ.


















