ಹಾಸನ: ಹಾಸನ ಜಿಲ್ಲೆಯಲ್ಲಿ ಒಂದೇ ದಿನ ಮೂವರು ಹೃದಯಾಘಾತಕ್ಕೆ ಬಲಿಯಾಗಿದ್ದು, ಡಿ ಗ್ರೂಪ್ ನೌಕರ ಸಾವನ್ನಪ್ಪಿದ್ದಾರೆ.
ಚನ್ನರಾಯಪಟ್ಟಣ ತಾಲ್ಲೂಕಿನ ಡಿ ಗ್ರೂಪ್ ನೌಕರ ಕುಮಾರ್ (57) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ನುಗ್ಗೆಹಳ್ಳಿ ನಾಡ ಕಚೇರಿಯಲ್ಲಿ ಕುಮಾರ್ ಡಿ ಗ್ರೂಪ್ ನೌಕರನಾಗಿ ಕೆಲಸ ಮಾಡುತ್ತಿದ್ದರು. ಭಾನುವಾರ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಈ ಹಿಂದೆ ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಕುಮಾರ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಹಠಾತ್ ಸಾವನ್ನಪ್ಪಿದ್ದಾರೆ. ಕುಮಾರ್ ಮೂಲತಃ ಚನ್ನರಾಯಪಟ್ಟಣ ತಾಲ್ಲೂಕಿನ ನಲ್ಲೂರಿನವರು ಎನ್ನಲಾಗಿದೆ.



















