ಪ್ರಸಿದ್ಧ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ (Bigg Boss Kannada) 11 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿದೆ. ಸೀಸನ್ 12ಕ್ಕೆ ಕೆಲವೇ ತಿಂಗಳು ಬಾಕಿ ಇರೋವಾಗಲೇ ಬಿಗ್‌ಬಾಸ್ ಟೀಮ್ ನಿಂದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.
ಕಿಚ್ಚ ಸುದೀಪ್ (Kichcha Sudeep) ಅವರೇ 12ನೇ ಸೀಸನ್‌ಗೂ ನಿರೂಪಣೆ ಮಾಡುವುದಾಗಿ ಸ್ಪಷ್ಟನೆ ಸಿಕ್ಕಿದೆ. ಬಿಗ್‌ಬಾಸ್ ಸಂಯೋಜಕರು ಹಾಗೂ ಕಲರ್ಸ್ ತಂಡ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ಪ್ರಕಟಿಸಿದೆ.
11ನೇ ಸೀಸನ್ ಸಂದರ್ಭದಲ್ಲಿ ನಿರೂಪಕ ಕಿಚ್ಚ ಸುದೀಪ್ ವಿದಾಯ ಹೇಳುತ್ತೇನೆ ಅಂದಿದ್ದರು. ಹೀಗಾಗಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಸಾಕಷ್ಟು ಚರ್ಚೆಗಳು ಶುರುವಾಗಿದ್ದವು. ಈ ಬಗ್ಗೆ ಕಿಚ್ಚ ಸುದೀಪ್ ಕೂಡಾ ಕಾದು ನೋಡಿ ಎಂದು ಹೇಳಿದ್ದರು. ಈಗ ಎಲ್ಲ ಗೊಂದಲಗಳಿಗೆ ತೆರೆ ಬಿದ್ದಿದ್ದು, 12ನೇ ಸೀಸನ್ ನಡೆಸಿಕೊಡುವ ಬಗ್ಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ ಕಿಚ್ಚ.
ಕಿಚ್ಚ ಸುದೀಪ್ ಇಲ್ಲದೇ ಬಿಗ್‌ಬಾಸ್ ನಿರೂಪಣೆಯನ್ನ ಊಹೆ ಮಾಡಿಕೊಳ್ಳುವುದಕ್ಕೂ ಆಗುವುದಿಲ್ಲ ಎನ್ನುವುದು ಅಭಿಮಾನಿಗಳ ಅಭಿಪ್ರಾಯವಾಗಿತ್ತು. ಈಗ ಕಿಚ್ಚ ಅಧಿಕೃತವಾಗಿ 12ರಲ್ಲಿಯೂ ಇರುವುದರ ಬಗ್ಗೆ ಖಚಿತವಾಗಿ ಹೇಳುತ್ತಿದ್ದಂತೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.