ಬೆಂಗಳೂರು ಗ್ರಾಮಾಂತರ.: ಮೈಕ್ರೋ ಪೈನಾನ್ಸ್ ಕಿರುಕುಳಕ್ಕೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ.
ಲೋನ್ ಕಟ್ಟುವಂತೆ ನೋಟಿಸ್ ನೀಡಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜನ ಸ್ಮಾಲ್ ಪೈನಾನ್ಸ್ ಬ್ಯಾಂಕ್ ವಿರುದ್ದ ಸೆಲ್ಪಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. .
ದೇವನಹಳ್ಳಿ ತಾಲೂಕಿನ ಗೋಕರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಸುಬ್ರಹ್ಮಣಿ ( 38) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೃತ ಸುಬ್ರಹ್ಮಣಿ ಜನ ಪೈನಾನ್ಸ್ ಬ್ಯಾಂಕ್ ನಲ್ಲಿ 5 ಲಕ್ಷ ಲೋನ್ ಪಡೆದಿದ್ದರು ಎನ್ನಲಾಗಿದೆ. ಆದರೆ, ಇತ್ತೀಚೆಗೆ ಕಂತು ತುಂಬಲು ಹಣ ಇರಲಿಲ್ಲ. ಹೀಗಾಗಿ ಕಂತು ತುಂಬಿರಲಿಲ್ಲ. ಈ ಹಿನ್ನೆಲೆಯಲ್ಲಿ ಬ್ಯಾಂಕ್ ನೋಟಿಸ್ ನೀಡಿತ್ತು. ಹಣ ಕಟ್ಟದಿದ್ದರೆ ಮನೆ ಸೀಜ್ ಮಾಡುವುದಾಗಿ ನೋಟಿಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ನನ್ನ ಸಾವಿಗೆ ಜನ ಪೈನಾನ್ಸ್ ಬ್ಯಾಂಕ್ ಕಾರಣ ಅಂತಾ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಫೈನಾನ್ಸ್ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.