ಉಡುಪಿ: ಬ್ರಹ್ಮಾವರ ತಾಲೂಕಿನ ಕುಂಜಾಲು ಪರಿಸರದಲ್ಲಿ ಗೋವಿನ ರುಂಡ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವಿಷಯವಾಗಿ ಮಾತನಾಡಿದ ಅವರು, ಕರಾವಳಿಯಲ್ಲಿ anti ಕಮಿನಲ್ ಫೋರ್ಸ್ ರಚನೆ ಮಾಡಿದ್ದಾರೆ. ಅದರ ಬದಲಿಗೆ ಗೋ ಹತ್ಯೆ ನಿಯಂತ್ರಿಸಲು ಕ್ರಮ ಕೈಗೊಳ್ಳಿ ಎಂದು ಹೇಳಿದ್ದೆ. ಗೋ ಹತ್ಯೆ, ಲವ್ ಜಿಹಾದ್, ಡ್ರಗ್ಸ್ ನಿಯಂತ್ರಣಕ್ಕೆ ಪೊಲೀಸ್ ತಂಡ ರಚಿಸಬೇಕಿತ್ತು. ಆಗ ಇಂತಹ ಸಮಸ್ಯೆಗಳು ಎದುರಾಗುವುದಿಲ್ಲ. ಆದರೆ, ಈ ಸರ್ಕಾರ ಒಂದು ಸಮುದಾಯದ ಓಲೈಕೆಗೆ ಪೋರ್ಸ್ ರಚನೆ ಮಾಡಿದ್ದಾರೆ. ಇಂದು ಕಾರ್ಯಕರ್ತರಿಗೆ ಕಿರುಕುಳ ನೀಡಲು ಈ ತಂಡ ರಚನೆಯಾಗಿದೆ ಎಂದು ಆರೋಪಿಸಿದ್ದಾರೆ.
ಜಿಲ್ಲೆಯ ಅತಿ ದೊಡ್ಡ ಗೋಶಾಲೆ ಹಾಗೂ ರಾಮಮಂದಿರ ಇರುವ ಜಾಗದ ಆಸುಪಾಸಿನಲ್ಲಿ ಇಂತಹ ಘಟನೆ ನಡೆದಿದೆ. ಹಸುವಿನ ರುಂಡ ಕತ್ತರಿಸಿ ಎಸೆದು ಹೋಗಿರುವುದು ಖಂಡನೀಯ. ಈ ಘಟನೆಯಿಂದ ಹಿಂದೂಗಳ ನಂಬಿಕೆಗೆ ಧಕ್ಕೆಯಾಗಿದೆ. ಇಂತಹ ಘಟನೆಗಳು ನಡೆಯದಂತೆ ಕ್ರಮ ವಹಿಸಿ ಎಂದು ಎಚ್ಚರಿಕೆ ನೀಡಿದ್ದಾರೆ.