ತುಮಕೂರು: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಯುವಕ ಬಲಿಯಾಗಿರುವ ಘಟನೆ ನಡೆದಿದೆ.
ಬಿಜೆಪಿ ಯುವ ಮೋರ್ಚಾ ಮುಖಂಡ ಹಠಾತ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೆಬ್ಬಾಕ ನೀಲಕಂಠಸ್ವಾಮಿ(36) ಸಾವನ್ನಪ್ಪಿದ್ದಾರೆ.
ತುಮಕೂರಿನ ಕುವೆಂಪು ನಗರದಲ್ಲಿ ನೀಲಂಕಠಸ್ವಾಮಿ ಇದ್ದಕ್ಕಿದ್ದಂತೆ ತಲೆ ಸುತ್ತಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಕುರಿತು ಹೊಸಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.