ಚಿಕ್ಕಬಳ್ಳಾಪುರ: 5 ವರ್ಷವೂ ನಾನೇ ಸಿಎಂ, ನಮ್ಮ ಸರ್ಕಾರ ಬಂಡೆಯಂತೆ ಇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ (Chikkaballapura) ಕ್ಯಾಬಿನೆಟ್ ಸಭೆಗೂ ಮುನ್ನ ನಂದಿ ಗ್ರಾಮದ ಭೋಗನಂದೀಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಮಾತನಾಡಿದ ಅವರು, 5 ವರ್ಷ ನಾನೇ ಸಿಎಂ ಆಗಿರುತ್ತೇನೆ. ಬಿಜೆಪಿಯವರು ಸುಳ್ಳು ಹೇಳುವುದನ್ನು ಬಿಟ್ಟು ಬೇರೆ ಏನೂ ಮಾಡಲ್ಲ. ಬಿಜೆಪಿಯವರು ಯಾವಾಗಲೂ ಹಗಲು ಕನಸಿನಲ್ಲೇ ಇರುತ್ತಾರೆ. ಅಧಿಕಾರದಲ್ಲಿದ್ದಾಗ ಅವರ ಕೈಯಲ್ಲಿ ಏನೂ ಮಾಡಲು ಆಗಲಿಲ್ಲ. ಡಿಕೆಶಿ ಹೇಳುವಂತೆ ಸಾಕ್ಷಿ ಗುಡ್ಡೆ ಬಿಟ್ಡು ಹೋಗಿದ್ದಾರೆ. ಕುಮಾರಸ್ವಾಮಿ ಜೊತೆ ಸಮ್ಮಿಶ್ರ ಸರ್ಕಾರದಲ್ಲಿ ಏನು ಮಾಡಿದ್ರು? ಎಂದು ಪ್ರಶ್ನಿಸಿದ್ದಾರೆ.
ಸತ್ಯಕ್ಕೂ ಅವರಿಗೂ ಸಂಬಂಧವೇ ಇಲ್ಲ. ನಾವೆಲ್ಲ ಒಗ್ಗಟ್ಟಾಗಿಯೇ ಇದ್ದೇವೆ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಹೀಗಾಗಿ 5 ವರ್ಷ ನಾನೇ ಸಿಎಂ ಆಗಿ ಇರುತ್ತೇನೆ. ನಮ್ಮ ಸರ್ಕಾರ (Congress Government) ಬಂಡೆ ತರ ಇರುತ್ತದೆ ಎಂದಿದ್ದಾರೆ.
2ನೇ ವರ್ಷದ ಸಾಧನಾ ಸಮಾವೇಶದಲ್ಲಿ 3 ಲಕ್ಷ ಜನ ಸೇರಿದ್ದರು. ಜನ ಸುಮ್ಮನೆ ಬರುವುದಿಲ್ಲ. ಸುಮ್ಮನೆ ಮತ ಹಾಕುವುದಿಲ್ಲ ಎಂದು ವಿರೋಧಿಗಳಿಗೆ ಟಾಂಗ್ ಕೊಟ್ಟಿದ್ದಾರೆ.