ಬೆಂಗಳೂರು: ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕ್ಲಿನಿಕಲ್ ಟ್ರಯಲ್ ಹಗರಣಕ್ಕೆ ಸಂಬಂಧಿಸಿದಂತೆ ಎಚ್ ಸಿಜಿ ಕ್ಯಾನ್ಸರ್ ಆಸ್ಪತ್ರೆ ವಿರುದ್ಧ ತನಿಖೆಗೆ ಆದೇಶ ನೀಡುವಂತೆ ಆಗ್ರಹಿಸಿ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ.
ಕೇಂದ್ರ ಔಷಧ ನಿಯಂತ್ರಣಾಲಯಕ್ಕೆ ರಾಜ್ಯ ಆರೋಗ್ಯ ಇಲಾಖೆಯಿಂದ ಪತ್ರ ಬರೆಯಲಾಗಿದೆ. ಈ ಮೂಲಕ ಟ್ರಯಲ್ ಹಗರಣದ ಬೃಹತ್ ಬಿರುಗಾಳಿ ಬಯಲಾಗಿದೆ. HCG ಕ್ಯಾನ್ಸರ್ ಆಸ್ಪತ್ರೆಯಲ್ಲಿ ಆಘಾತಕಾರಿ ಕ್ಲಿನಿಕಲ್ ಟ್ರಯಲ್ ಬಗ್ಗೆ ಆರೋಪಿಸಿ ಆಡಳಿತ ಮಂಡಳಿಗೆ ಹಲವು ಬಾರಿ ನ್ಯಾಯಮೂರ್ತಿ ಕೃಷ್ಣಭಟ್ ಪತ್ರ ಬರೆದಿದ್ದರು. ಅಲ್ಲದೇ, ರಾಜೀನಾಮೆ ನೀಡಿದ್ದರು.
ಆದರೆ, ಆಡಳಿತ ಮಂಡಳಿ ಮಾತ್ರ ಪ್ರಕರಣ ಮುಚ್ಚಿ ಹಾಕುವ ಯತ್ನ ಮಾಡುತ್ತಿದೆ. ಈ ಬೆನ್ನಲ್ಲೇ ಕಂಪನಿಯ ಸಿಇಓ, ವೈದ್ಯಕೀಯ ನಿರ್ದೇಶಕರಿಂದಲೂ ರಾಜೀನಾಮೆ ನೀಡಿದ್ದಾರೆ. ಹಲವು ವೈದ್ಯರೂ ಸರಣಿ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಪತ್ರ ಬರೆಯಲಾಗಿದೆ. ಹಗರಣದ ಕುರಿತು ತನಿಖೆ ನಡೆಸುವಂತೆ ಪತ್ರ ಬರೆಯಲಾಗಿದೆ.