ಚಾಮರಾಜನಗರ: ಜಿಲ್ಲೆಯಲ್ಲಿ ಕಾಡಾನೆಗಳ ಕಾಟ ಮಿತಿ ಮೀರುತ್ತಿದ್ದರಿಂದ ರೊಚ್ಚಿಗೆದ್ದಿರುವ ರೈತರು, ಎಸಿಎಫ್ ಗೆ ದಿಗ್ಬಂಧನ ಹಾಕಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಕುರುಬರಹುಂಡಿಯಲ್ಲಿ ಈ ಘಟನೆ ನಡೆದಿದೆ. ಬಂಡೀಪುರ ಅರಣ್ಯದಂಚಿನ ಕುರುಬರಹುಂಡಿಯಲ್ಲಿ ಈ ಘಟನೆ ನಡೆದಿದೆ. ಈ ಕುರಿತು ಅರಣ್ಯಾಧಿಕಾರಿಗಳಿಗೆ ಕರೆ ಮಾಡಿದರೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳೆ ಹಾನಿ ಪರಿಶೀಲಿಸಲು ಬಂದ ಎಸಿಎಫ್ ಸುರೇಶ್ ಗೆ ರೈತರು ವಿನೂತನ ಪ್ರತಿಭಟನೆ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಪ್ರತಿಭಟನಾಕಾರರು ಜೀಪ್ ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸ್ಥಳಕ್ಕೆ ಡಿಸಿಎಫ್ ಬರಬೇಕೆಂದು ಪಟ್ಟು ಹಿಡಿದಿದ್ದರು.
















