ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಂಪುಟ ಸಭೆಯ ನಂತರ ಸಿಎಂ ಹೇಳಿದ್ದೇನು? ಹಲವು ಜಿಲ್ಲೆಗಳು ಹೋಳಾಗುತ್ತವಾ?

July 2, 2025
Share on WhatsappShare on FacebookShare on Twitter

ಬೆಂಗಳೂರು: ಅಭಿವೃದ್ಧಿಗೆ 3400 ಕೋಟಿ ರೂ. ಮೊತ್ತವನ್ನು ಮಂಜೂರು ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

2050 ಕೋಟಿ ರೂ. ಬೆಂಗಳೂರು ಜಿಲ್ಲಾ ಭಾಗಕ್ಕೆ ಕೊಟ್ಟಿದ್ದೇವೆ. ಎತ್ತಿನಹೊಳೆ ಯೋಜನೆಗೆ ಒಟ್ಟು 23,251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17147 ಕೋಟಿ ಖರ್ಚಾಗಿದೆ ಎಂದಿದ್ದಾರೆ.

ಮೂಲತಃ ಕುಡಿಯುವ ನೀರಿನ ಯೋಜನೆ ಇದಾಗಿದೆ. ಕೆರೆಗಳಿಗೆ ನೀರು ತುಂಬಿಸುವುದು ನಂತರದ ಆದ್ಯತೆಯಾಗಿದೆ ಎಂದಿದ್ದಾರೆ.
24.1 TMC ನೀರಿನಲ್ಲಿ ಕುಡಿಯುವ ನೀರಿಗೆ 14 TMC ಬೇಕಾಗಿದೆ. ಆದ್ದರಿಂದ ಮೊದಲು ಕುಡಿಯುವ ನೀರನ್ನು ಕೊಡುವ ಯೋಜನೆ ಮುಗಿಸಲು ಸಂಪುಟ ಸಭೆ ತೀರ್ಮಾನ ಮಾಡಿದೆ. ಎರಡು ವರ್ಷಗಳಲ್ಲಿ ಉದ್ದೇಶಿತ ಜಿಲ್ಲೆ, ತಾಲ್ಲೂಕುಗಳಿಗೆ ನೀರು ಕೊಡುತ್ತೇವೆ ಎಂದಿದ್ದಾರೆ. 9,807ಕೋಟಿ ರೂ. ಮೊತ್ತದಲ್ಲಿ ಗ್ರಾವಿಟಿ ಮುಖ್ಯ ಕೆನಲ್ ನ‌ ಕೆಲಸ ಶೇ. 85ರಷ್ಟು ಮಗಿದಿದೆ. ಹೆಚ್ಚುವರಿಯಾಗಿ ಇದಕ್ಕೆ 8000 ಕೋಟಿ ರೂ.ಬೇಕಾಗಿದೆ. ಬಾಕಿ ಉಳಿದಿರುವುದು 6000 ಚಿಲ್ಲರೆ ಕೋಟಿ ರೂ. ಎಂದಿದ್ದಾರೆ. ಒಟ್ಟು 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಕೊಡ್ತೀವಿ. ಈ ಕುರಿತು ಈ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಮುಂದಿನ‌ ಕ್ಯಾಬಿನೆಟ್ ನಲ್ಲಿ ನಿರ್ಣಯಿಸಲು ತೀರ್ಮಾನಿಸಲಾಗುವುದು ಎಂದಿದ್ದಾರೆ.

ಬೆಂಗಳೂರು ಜಿಲ್ಲೆಗಳ 31 ವಿಷಯಗಳು ಚರ್ಚೆಯಾಗಿ 2250 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಪ್ರತಿ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು ಇದಕ್ಕೆ 1125.25 ಕೋಟಿ ಮಂಜೂರು ಮಾಡಲಾಗಿದೆ. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೀರಾವರಿ ಯೋಜನೆ, ಕೆರೆ ತುಂಬಿಸುವ ಯೋಜನೆಗಳನ್ನೇ ಪ್ರಮುಖವಾಗಿ ಚರ್ಚಿಸಲಾಗಿದೆ.

ಹಿಂದುಳಿದ ವರ್ಗದ ಅಭ್ಯರ್ಥಿಗಳು IAS, IRS, IPS ಸೇರಿ ಸ್ಪರ್ಧಾತ್ಮಕ ಪರೀಕ್ಷಾ‌ ತರಭೇತಿಗೆ 10 ಕೋಟಿ ವೆಚ್ಚದ ಎರಡು ವಸತಿ ಶಾಲೆ ಬೆಂಗಳೂರಿನಲ್ಲಿ ನಿರ್ಮಿಸಲಾಗುವುದು. ಬೆಂಗಳೂರು ಕೇಂದ್ರ ವಿವಿಗೆ “ಡಾ.ಮನಮೋಹನ್ ಸಿಂಗ್ ಬೆಂಗಳೂರು ಸಿಟಿ ವಿವಿ ಎಂದು ಹೆಸರಿಡಲು ತೀರ್ಮಾನ ಮಾಡಲಾಗಿದೆ. PHC ಗಳಿಲ್ಲದ ಹೊಸ ತಾಲ್ಲೂಕುಗಳಲ್ಲಿ CHC ಗಳನ್ನು ಆರಂಭಿಸಲು ತೀರ್ಮಾನ ಮಾಡಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ “ಬೆಂಗಳೂರು ಉತ್ತರ ತಾಲ್ಲೂಕು” ಎಂದು ಬಾಗೇಪಲ್ಲಿಗೆ “ಭಾಗ್ಯನಗರ” ಎಂದು ಹೆಸರಿಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

ನಾವು ಆಡಳಿತವನ್ನು ಬೆಂಗಳೂರು ಕೇಂದ್ರಿತ ಎಂಬುವುದನ್ನು ತಪ್ಪಿಸಿ ವಿಕೇಂದ್ರೀಕರಣ ಮಾಡುವುದಕ್ಕಾಗಿಯೇ ಆಯಾ ಭಾಗದ ಸಮಸ್ಯೆಗಳ ಮೇಲೆ ಗಮನ ಹರಿಸಿ ಅವುಗಳಿಗೆ ಚಿಕಿತ್ಸಕ ಪರಿಹಾರ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಗಳನ್ನು ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆಸುತ್ತಿದ್ದೇವೆ. ಮೊದಲಿಗೆ ಕಲಬುರಗಿಯಲ್ಲಿ ಆ ನಂತರ ಮಲೈ ಮಹದೇಶ್ವರ ಬೆಟ್ಟದಲ್ಲಿ ಸಭೆ ನಡೆಸಿದ್ದೆವು. ಮೂರನೆಯದಾಗಿ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸುತ್ತಿದ್ದೇವೆ. ಈ ಸಚಿವ ಸಂಪುಟ ಸಭೆಯಲ್ಲಿ ನಾವು 3400 ಕೋಟಿ ರೂಗಳಿಗೆ ಅನುಮೋದನೆ ನೀಡಿದ್ದೇವೆ. ಈ ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ನೀರಾವರಿ, ಪ್ರವಾಸೋದ್ಯಮ, ರಸ್ತೆ- ಸೇತುವೆ ಮುಂತಾದ ವಿಷಯಗಳಿಗೆ ಆದ್ಯತೆ ನೀಡಿ ಅನುಮೋದನೆ ನೀಡಲಾಗಿದೆ.

ಈ ಸಭೆಯಲ್ಲಿ ಅತ್ಯಂತ ಮುಖ್ಯವಾಗಿ ಕುಡಿಯುವ ನೀರಿನ ಯೋಜನೆಗಳು ಅದರಲ್ಲೂ ಮುಖ್ಯವಾಗಿ ಎತ್ತಿನ ಹೊಳೆ ಯೋಜನೆಯ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಕಳೆದ ವರ್ಷವೇ ಎತ್ತಿನ ಹೊಳೆಯ ನೀರನ್ನು ಎತ್ತಿನ ಯಶಸ್ವಿಯಾಗಿ ಹರಿಸಲಾಯಿತು.

ಸಭೆಯಲ್ಲಿ ನಾವು ಎತ್ತಿನಹೊಳೆ ಯೋಜನೆಯನ್ನು ವೇಗಗೊಳಿಸಲು ಹಾಗೂ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಹಳ್ಳಿಗಳಿಗೆ ಹರಿಸಲು ನಿರ್ದೇಶನಗಳನ್ನು ನೀಡಲಾಯಿತು. ಇದರಲ್ಲಿ ಬೆಂಗಳೂರು ವಿಭಾಗದ ಜಿಲ್ಲೆಗಳಿಗೆ ಸಂಬಂಧಿಸಿದಂತೆ 31 ವಿಷಯಗಳಿಗೆ 2525 ಕೋಟಿ ರೂಗಳನ್ನು ಒದಗಿಸುವ ಕಾಮಗಾರಿ, ಯೋಜನೆಗಳ ಕುರಿತು ಚರ್ಚಿಸಿ ಅನುಮೋದನೆ ನೀಡಲಾಯಿತು.

ಶಿಕ್ಷಣಕ್ಕೆ- 1627.25 ಕೋಟಿ ರೂ ನೀಡಿದ್ದೇವೆ. ಇದರಲ್ಲಿ ಕಾಲೇಜು, ವಿಶ್ವವಿದ್ಯಾಲಯಗಳ ಮೂಲಭೂತ ಸೌಕರ್ಯ ಒದಗಿಸುತ್ತಿದ್ದೇವೆ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐಎಎಸ್, ಐಪಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ 10 ಕೋಟಿ ರೂ ವೆಚ್ಚದಲ್ಲಿ ಎರಡು ವಸತಿ ನಿಲಯ ನಿರ್ಮಿಸಲು ತೀರ್ಮಾನಿಸಿದ್ದೇವೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ 1125.25 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ ನೀಡಿದ್ದೇವೆ.

ನೀರಾವರಿ ಯೋಜನೆಗಳಿಗೆ – 1154 ಕೋಟಿ ನೀಡಿದ್ದೇವೆ. ಇದರಲ್ಲಿ 237 ಕೋಟಿ ರೂಗಳನ್ನು ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡಿ ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲ್ಲೂಕಿನ 164 ಕೆರೆಗಳಿಗೆ ತುಂಬಿಸುವ ಯೋಜನೆಗೆ ಅನುಮೋದನೆ ನೀಡಿದ್ದೇವೆ.

ಈ ಭಾಗದಲ್ಲಿ ಅತಿ ಹೆಚ್ಚಾಗಿ ಗುಣಮಟ್ಟದ ಹೂ ಬೆಳೆಯುತ್ತಾರೆ. ಆದ್ದರಿಂದ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರವನ್ನು 10 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಅನುಮೋದನೆ ಮಾಡಲಾಗಿದೆ.

ಇದರ ಜೊತೆಗೆ ಚಿಕ್ಕಬಳ್ಳಾಪುರದಲ್ಲಿ ಎಪಿಎಂಸಿ ವತಿಯಿಂದ 141.5 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.

ಆರೋಗ್ಯ ಇಲಾಖೆ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 46 ಕೋಟಿ ರೂ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಹಾಗೂ 21.40 ಕೋಟಿ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿಯಲ್ಲಿನ ಮೆಡಿಕಲ್ ಕಾಲೇಜುಗಳಿಗೆ ಎಂಆರ್ ಐ ಯಂತ್ರಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಹಾಗೂ 56 ಕೋಟಿ ರೂ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೈವಾರ ಪಿಎಚ್ ಸಿ, ಹಾಗೂ ಮಂಚೇನಹಳ್ಳಿಯ ಆಸ್ಪತ್ರೆಗಳನ್ನು ಉನ್ನತೀಕರಿಸಲು ಹಾಗೂ ಹೆಚ್ಚುವರಿ ಕಾಮಗಾರಿ ತೆಗೆದುಕೊಳ್ಳಲು ತೀರ್ಮಾನಿಸಿದ್ದೇವೆ
ಒಟ್ಟಾರೆ 123 ಕೋಟಿ ರೂ ವೆಚ್ಚದಲ್ಲಿ ಆರೋಗ್ಯ ಸಂಬಂಧಿತ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.

ಈ ಸಭೆಯಲ್ಲಿ ನಾವು ಹಲವು ಐತಿಹಾಸಿಕ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಿದ್ದೇವೆ. ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಹೆಸರಿಡಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ.

Tags: 3400 crorebengalorecm siddaramaigovernmentMoney
SendShareTweet
Previous Post

ಅರಣ್ಯ ಅಧಿಕಾರಿಗಳ ಭ್ರಷ್ಟಾಚಾರದ ಬಗ್ಗೆ ದೂರು

Next Post

ಡಿಬಾಸ್ ಫ್ಯಾನ್ಸ್ ವಿರುದ್ಧ ಕಿಡಿಕಾರಿದ ಪ್ರಥಮ್!

Related Posts

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!
ರಾಜ್ಯ

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಕನ್ನೌಜ್‌ ಕೋಟೆಯಲ್ಲಿ ಖಾಲಿ ಕುರ್ಚಿಗಳ ದರ್ಬಾರ್: ಯೋಗಿ ಮುಂದೆ ಮಂಕಾಯಿತೇ ಬಿಎಸ್​ಪಿ
ರಾಜಕೀಯ

ಕನ್ನೌಜ್‌ ಕೋಟೆಯಲ್ಲಿ ಖಾಲಿ ಕುರ್ಚಿಗಳ ದರ್ಬಾರ್: ಯೋಗಿ ಮುಂದೆ ಮಂಕಾಯಿತೇ ಬಿಎಸ್​ಪಿ

ಬೆಂಗಳೂರು-ವ್ಯಾಂಕೋವರ್ ‘ಸಿಸ್ಟರ್ ಏರ್‌ಪೋರ್ಟ್’ ಒಪ್ಪಂದ: ದಕ್ಷಿಣ ಭಾರತ-ಕೆನಡಾ ನಡುವೆ ನೇರ ವಿಮಾನ ಸೇವೆಗೆ ಭದ್ರ ಬುನಾದಿ
ರಾಜ್ಯ

ಬೆಂಗಳೂರು-ವ್ಯಾಂಕೋವರ್ ‘ಸಿಸ್ಟರ್ ಏರ್‌ಪೋರ್ಟ್’ ಒಪ್ಪಂದ: ದಕ್ಷಿಣ ಭಾರತ-ಕೆನಡಾ ನಡುವೆ ನೇರ ವಿಮಾನ ಸೇವೆಗೆ ಭದ್ರ ಬುನಾದಿ

ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ರಾಜ್ಯದ 11 ಜಿಲ್ಲೆಗಳಿಗೆ ಮಳೆ ಅಲರ್ಟ್

ಆಯುಧ ಪೂಜೆ- ವಿಜಯದಶಮಿ ಆಚರಣೆಗೆ ನಗರ ಸಜ್ಜು| ಮಾರುಕಟ್ಟೆಯಲ್ಲಿ ಬಿರುಸಿನ ವ್ಯಾಪಾರ
ರಾಜ್ಯ

ದಸರಾ ಹಬ್ಬಕ್ಕೆ ಭಾರಿ ಬೆಲೆ ಏರಿಕೆ

ಪಿಲಿಕುಳ ಕಂಬಳಕ್ಕೆ ಶುರುವಾದ ಸಂಕಷ್ಟ
ರಾಜ್ಯ

ಮೈಸೂರು ದಸರಾ ಕಂಬಳಕ್ಕೆ ಅದ್ಧೂರಿ ಚಾಲನೆ

Next Post
ಡಿಬಾಸ್ ಫ್ಯಾನ್ಸ್ ವಿರುದ್ಧ ಕಿಡಿಕಾರಿದ ಪ್ರಥಮ್!

ಡಿಬಾಸ್ ಫ್ಯಾನ್ಸ್ ವಿರುದ್ಧ ಕಿಡಿಕಾರಿದ ಪ್ರಥಮ್!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಆನ್ ಲೈನ್ ಮೂಲಕವೇ 2 ಗಂಟೆಯಲ್ಲಿ ಫಾಸ್ಟ್ಯಾಗ್ ಪಾಸ್ ಆ್ಯಕ್ಟಿವೇಷನ್: ಹೀಗೆ ಮಾಡಿ

ಆನ್ ಲೈನ್ ಮೂಲಕವೇ 2 ಗಂಟೆಯಲ್ಲಿ ಫಾಸ್ಟ್ಯಾಗ್ ಪಾಸ್ ಆ್ಯಕ್ಟಿವೇಷನ್: ಹೀಗೆ ಮಾಡಿ

ನವೆಂಬರ್ 1ರಿಂದ ವಂಚಕರಿಗೆ ಕಡಿವಾಣ: ಇನ್ ಕಮಿಂಗ್ ಕರೆ ನಿಯಮಗಳಲ್ಲಿ ಭಾರಿ ಬದಲಾವಣೆ

ನವೆಂಬರ್ 1ರಿಂದ ವಂಚಕರಿಗೆ ಕಡಿವಾಣ: ಇನ್ ಕಮಿಂಗ್ ಕರೆ ನಿಯಮಗಳಲ್ಲಿ ಭಾರಿ ಬದಲಾವಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat