ಹಾವೇರಿ: ಜಿಲ್ಲೆಯಲ್ಲಿ ವ್ಯಕ್ತಿಯೋರ್ವ ಹಾರ್ಟ್ ಅಟ್ಯಾಕ್ ಗೆ ಬಲಿಯಾಗಿರುವ ಘಟನೆ ನಡೆದಿದೆ.
ಹಾರ್ಟ್ ಅಟ್ಯಾಕ್ ಗೆ 30 ವರ್ಷದ ರಮೇಶ್ ಬಲಿಯಾಗಿದ್ದಾರೆ. ರಮೇಶ್ ಹಳ್ಳಳ್ಳಿ ಎಂಬ ವ್ಯಕ್ತಿ ಹಾರ್ಟ್ ಅಟ್ಯಾಕ್ ಗೆ ಬಲಿಯಾಗಿದ್ದಾರೆ. ರಾಣೆಬೇನ್ನೂರು ತಾಲೂಕಿನ ಅಂತರವಳ್ಳಿ ಗ್ರಾಮದ ನಿವಾಸಿ ರಮೇಶ್ ಸಾವನ್ನಪ್ಪಿದ ಯುವಕ ಎನ್ನಲಾಗಿದೆ.
ನಿನ್ನೆ ಮಧ್ಯಾಹ್ನ ಜಮೀನಿನಲ್ಲಿ ಮನೆಯವರ ಜತೆ ಊಟಕ್ಕೆ ಕುಳಿತಿದ್ದ ವೇಳೆ ರಮೇಶ್ ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರಮೇಶ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ರಾಣೆಬೇನ್ನೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.