ಮೈಸೂರು: ನೆಟ್ ವರ್ಕ್ ಟವರ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ.
ಮೈಸೂರಿನ ಇಟ್ಟಿಗೆಗೂಡಿನಲ್ಲಿ ಈ ಘಟನೆ ನಡೆದಿದೆ. ಮೊಬೈಲ್ ಟವರ್ ನೆಟ್ ವರ್ಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಪರಿಣಾಮ ನೆಟ್ ವರ್ಕ್ ವೈರ್ ಗಳು, ಜನರೇಟರ್ ರೂಮ್ ಬೆಂಕಿಗೆ ಆಹುತಿಯಾಗಿವೆ. ಆದರೆ, ಭಾರೀ ಅನಾಹುತ ತಪ್ಪಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ನಜರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.