ಕಲಬುರಗಿ: ದರ್ಗಾದಲ್ಲಿ ಇಟ್ಟಿದ್ದ 14 ತೊಲ ಬಂಗಾರದ ಆಭರಣ ಕಳ್ಳತನ ಮಾಡಿರುವ ಘಟನೆ ನಡೆದಿದೆ.
ಜಿಲ್ಲೆಯ ಅಫಜಲಪುರ ತಾಲೂಕಿನ ಹಸರಗುಂಡಗಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿನ ಹಜರತ್ ಲಾಲಸಾಹೆಬ್ ಮೌಲಾಲಿ ದರ್ಗಾದಲ್ಲಿ ಈ ಘಟನೆ ನಡೆದಿದೆ. ಮೊಹರಂ ದೇವರ ಆಭರಣ ಕಳ್ಳತನ ಮಾಡಿ ಆಭರಮಗಳ ಲಾಕರ್ ಮುರಿದು ಖದೀಮರು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಪೋಲಿಸರು, ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ದೇವಲ ಗಾಣಗಾಪೂರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.