ಬೆಳಗಾವಿ: ಗೋ ರಕ್ಷಕರ ಮೇಲಿನ ಹಲ್ಲೆ ಖಂಡಿಸಿ ನಾಳೆ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿತ್ತು. ಇದನ್ನು ಖಂಡಿಸಿ ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇದೆ.
ಗುರುವಾರ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆಗೆ ಕರೆ ನೀಡಲಾಗಿದೆ. ಶ್ರೀರಾಮ ಸೇನೆ ನೇತೃತ್ವದಲ್ಲಿ ಜಿಹಾದಿಗಳ ವಿರುದ್ದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಶ್ರೀರಾಮ ಸೇನಾ ಅಧ್ಯಕ್ಷ ಪ್ರಮೋದ ಮುತಾಲಿಕ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ ಎಂದು ರಾಜ್ಯಾದ್ಯಕ್ಷ ಗಂಗಾಧರ ಕುಲಕರ್ಣಿ ತಿಳಿಸಿದ್ದಾರೆ.
ರಾಜ್ಯದ ಮೂಲೆ ಮೂಲೆಯಿಂದ ಶ್ರೀರಾಮ ಸೇನೆ ಕಾರ್ಯಕರ್ತರು ಭಾಗಿಯಾಗಬೇಕು ಎಂದು ಈ ವೇಳೆ ಕರೆ ನೀಡಲಾಗಿದೆ. ಚನ್ನಮ್ಮ ಮೃತ್ತದಲ್ಲಿ ಪ್ರತಿಭಟನೆ ನಡೆಸಿದ ನಂತರ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮಕ್ಕೆ ಶ್ರೀರಾಮ ಸೇನೆ ಕಾರ್ಯಕರ್ತರು ತೆರಳಲಿದ್ದಾರೆ.