ಮಳೆಗಾಲದಲ್ಲಿ ಪ್ರವಾಸಿಗರ ನೆಚ್ಚಿನ ತಾಣಗಳಲ್ಲಿ ಚಿಕ್ಕಮಗಳೂರು ಒಂದು,ಇದೀಗ ಈ ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಎತ್ತಿನಭುಜ ಚಾರಣಕ್ಕೆ ಜುಲೈ 31ರ ವರೆಗೆ ತಾತ್ಕಾಲಿಕ ನಿರ್ಬಂಧ ಹೇರಿ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ಕೆಲವು ದಿನಗಳಿಂದ ಮಲೆನಾಡು ಭಾಗದಲ್ಲಿ ವಿಪರೀತ ಮಳೆಯಾಗುತ್ತಿದ್ದೂ ಪ್ರವಾಸಿಗರು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಮಳೆಯ ಜೊತೆ ಮಂಜು ಕವಿದ ವಾತಾವರಣ ಸೃಷ್ಟಿಯಾಗುತ್ತಿರುವುದರಿಂದ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.