ನವದೆಹಲಿ: ರಾಷ್ಟ್ರೀಯ ರಾಜಧಾನಿ ಪ್ರದೇಶ ಸಾರಿಗೆ ನಿಗಮದಲ್ಲಿ (NCRTC Recruitment 2025) ಖಾಲಿ ಇರುವ 8 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 8 ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಜುಲೈ 13 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿರುವ ಕಾರಣ, ಅಭ್ಯರ್ಥಿಗಳು ತುರ್ತಾಗಿ ಅರ್ಜಿ ಸಲ್ಲಿಸಬೇಕಾಗಿದೆ. ನೇಮಕಾತಿಯ ವಿವರ ಈ ಮುಂದಿನಂತಿದೆ.
ಯಾವ ಹುದ್ದೆಗಳು ಖಾಲಿ?
NCRTCಯ ಹಲವು ವಿಭಾಗಗಳಲ್ಲಿ ಹುದ್ದೆಗಳು ಖಾಲಿ ಇವೆ. ಎಕ್ಸಿಕ್ಯೂಟಿವ್, ಅಸಿಸ್ಟಂಟ್ ಜೂನಿಯರ್ ಎಂಜಿನಿಯರ್, ಪ್ರೋಗ್ರಾಂ ಅಸೋಸಿಯೇಟ್, ಜೂನಿಯರ್ ಮೇಂಟೇನರ್, ಗ್ರೂಪ್ ಜನರಲ್ ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್, ಸೆಮಿ ಪ್ರೊಫೇಷನಲ್ ಅಸಿಸ್ಟಂಟ್ ಹಾಗೂ ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ ಏನಿರಬೇಕು?
ಬಿ ಎಚ್ ಎಂ (ಹೋಟೆಲ್ ಮ್ಯಾನೇಜ್ಮೆಂಟ್ ಪದವಿ)
ಬಿ.ಟೆಕ್ / ಬಿಇ (ಬ್ಯಾಚುಲರ್ ಆಫ್ ಟೆಕ್ನಾಲಜಿ / ಎಂಜಿನಿಯರಿಂಗ್)
ಎಲ್ ಎಲ್ ಬಿ (ಕಾನೂನು ಪದವಿ)
ಬಿ ಎಚ್ ಎ (ಬ್ಯಾಚುಲರ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್)
ಬಿ.ಪ್ಲಾನ್ (ಬ್ಯಾಚುಲರ್ ಆಫ್ ಪ್ಲಾನಿಂಗ್)
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷಗಳು. ಆಯಾ ಸಮುದಾಯಗಳಿಗೆ ಅನುಗುಣವಾಗಿ ವಯೋಮಿತಿ ಸಡಿಲಿಕೆ ನೀಡಲಾಗುವುದು. ನೇಮಕಾತಿ ಹೊಂದಿದ ಅಭ್ಯರ್ಥಿಗೆ ಮಾಸಿಕ 30,000 ರೂ.ಗಳಿಂದ 1,20,000 ರೂ.ಗಳವರೆಗೆ ವೇತನ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು https://ncrtc.in/ ವೆಬ್ ಸೈಟ್ ಗೆ ಭೇಟಿ ನೀಡಿ, ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.



















