ಕಲಬುರಗಿ: ಲಿಂಗನವಾಡಿ ಗ್ರಾಮದಲ್ಲಿ ಹೃದಯಾಘಾತಕ್ಕೆ ರೈತ ಬಲಿಯಾಗಿರುವ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಿಂಗನವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಂತೋಷ್ ಇಂಡಿ (36) ಹೃದಯಾಘಾತಕ್ಕೆ ಬಲಿಯಾಗಿರುವ ಯುವ ರೈತ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಂತೋಷ್ ಲೋ ಬಿಪಿಯಿಂದ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಯಿತು. ಆದರೆ, ಮಾರ್ಗಮಧ್ಯೆ ಸಂತೋಷ್ ಸಾವನ್ನಪ್ಪಿದ್ದಾರೆ.