ಬೆಂಗಳೂರು: ಕೇಂದ್ರ ಸರ್ಕಾರಿ ಅಧೀನದ ಪ್ರಸಾರ ಭಾರತಿಯಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವವರಿಗೆ ಸುವರ್ಣಾವಕಾಶ ಲಭಿಸಿದೆ. ದೇಶದ ಹಲವೆಡೆ ಇರುವ ಪ್ರಸಾರ ಭಾರತಿ ಕಚೇರಿಗಳಲ್ಲಿ ಖಾಲಿ ಇರುವ 25 ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅಧಿಕೃತ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಂಬಿಎ , ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳಿಗಿಂತ ಕಡಿಮೆಯಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಕಿರುಪಟ್ಟಿ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಬೆಂಗಳೂರಿನಲ್ಲಿ ಒಂದು ಹುದ್ದೆ ಖಾಲಿ ಇರುವ ಕಾರಣ ಕನ್ನಡಿಗರಿಗೂ ಅವಕಾಶವಿದೆ. ಇನ್ನು, ದೇಶದ ಹಲವು ರಾಜ್ಯಗಳ ಪ್ರಮುಖ ನಗರಗಳಲ್ಲಿ ಹುದ್ದೆಗಳು ಖಾಲಿ ಇವೆ. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂ.ವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಪ್ರಸಾರ ಭಾರತಿ ವೆಬ್ ಸೈಟ್ ಆಗಿರುವ prasarbharati.gov.in. ಗೆ ಭೇಟಿ ನೀಡಿ
- ವೆಬ್ ಸೈಟ್ ನಲ್ಲಿರುವ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪರಿಶೀಲಿಸಬೇಕು.
- ಆನ್ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ಸಂವಹನ ಉದ್ದೇಶಕ್ಕಾಗಿ ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
- ಯಾವುದೇ ತಪ್ಪುಗಳು ಇಲ್ಲದೆ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ.