ಬೆಂಗಳೂರು: ನಗರದಲ್ಲಿ ರೈತರೊಬ್ಬರು ಹಾರ್ಟ್ ಅಟ್ಯಾಕ್ ಗೆ ಬಲಿಯಾಗಿರುವ ಘಟನೆ ನಡೆದಿದೆ.
ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗಾಗಿ ಆಗಿಮಿಸುತ್ತಿದ್ದ ವೇಳೆ ಗುಂಡ್ಲಪೇಟೆಯ 50 ವರ್ಷದ ರೈತ ಈಶ್ವರ್ (50) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಮೆಜೆಸ್ಟಿಕ್ ರೈಲ್ವೇ ನಿಲ್ದಾಣದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ರೈತ ಈಶ್ವರ್ ಗುಂಡ್ಲಪೇಟೆಯಿಂದ ಬೆಂಗಳೂರಿಗೆ ರೈಲಿನಲ್ಲಿ ಬಂದಿದ್ದರು. ರೈಲು ಇಳಿದು ಹೊರ ಬರುತ್ತಿದ್ದಂತೆ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಪೊಲೀಸರು ಸಿಪಿಆರ್ ಕೊಡಲು ಯತ್ನಿಸಿದ್ದಾರೆ.
ನಂತರ ಅಪೋಲೋ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಪ್ರಾಥಮಿಕ ತನಿಖೆ ವೇಳೆ ಹಾರ್ಟ್ ಅಟ್ಯಾಕ್ ನಿಂದ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ. ಸ್ಥಳಕ್ಕೆ ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.