ವಿಜಯನಗರ: ಕ್ಷುಲ್ಲಕ ಕಾರಣಕ್ಕೆ ಅಕ್ಕಪಕ್ಕದ ಮನೆಯವರ ಮಧ್ಯೆ ಜಗಳ ನಡೆದಿರುವ ಘಟನೆ ನಡೆದಿದೆ.
ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಗುಡೇಕೋಟೆ ಹೋಬಳಿಯ ಕಸಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಕ್ಷುಲ್ಲಕ ಕಾರಣಕ್ಕೆ ಈ ಘಟನೆ ನಡೆದಿದ್ದು, ಮಚ್ಚಿನಿಂದ ಮಹಿಳೆಯ ಮೇಲೆ ಬರ್ಬರವಾಗಿ ಹಲ್ಲೆ ಮಾಡಲಾಗಿದೆ. ಕೂದಲೆಳೆ ಅಂತರದಲ್ಲಿ ಮಹಿಳೆ ಪ್ರಾಣ ಉಳಿಸಿಕೊಂಡಿದ್ದಾರೆ.
ವ್ಯಕ್ತಿಯೋರ್ವ ಮಚ್ಚು ಹಿಡಿದು ಹಲ್ಲೆಗೆ ಯತ್ನಿಸಿರುವ ವಿಡಿಯೋ ಲಭ್ಯವಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಧುಸೂದನ್ ಅಲಿಯಾಸ್ ಮಾರಿಕಣಿವೆ ಮಚ್ಚು ಬೀಸಿ ದರ್ಪ ಮೆರೆದ ವ್ಯಕ್ತಿ ಎನ್ನಲಾಗಿದೆ. ಗುಡೇಕೋಟೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.



















