ಬೆಳಗಾವಿ: ಗೋಕಾಕ್ (Gokak) ಗ್ರಾಮದೇವಿ ಜಾತ್ರೆಗೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಎಎಸ್ ಐ ಹೃದಯಾಘಾತ (Heart Attack)ಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಮೀರಾ ನಾಯಕ್ (55) ಹೃದಯಾಘಾತಕ್ಕೆ ಬಲಿಯಾಗಿರುವ ಎಎಸ್ ಐ. ಮೀರಾ ನಾಯಕ್ ಹುಬ್ಬಳ್ಳಿ (Hubballi) ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ನಾಲ್ಕು ದಿನಗಳಿಂದ ಗೋಕಾಕ್ ನ ಗ್ರಾಮದೇವಿ ಜಾತ್ರೆಗೆ ಅವರನ್ನು ಕರ್ತವ್ಯಕ್ಕೆಂದು ನಿಯೋಜನೆ ಮಾಡಲಾಗಿತ್ತು.
ಪಟ್ಟಣದ ಎಸ್ಸಿ, ಎಸ್ಟಿ ಬಾಲಕರ ಹಾಸ್ಟೇಲ್ ನಲ್ಲಿ ವಾಸ್ತವ್ಯ ಹೂಡಿದ್ದರು. ಆದರೆ, ಇಂದು ಬೆಳಗ್ಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.