ಕಲಬುರಗಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೇಕರಿ ಹಾಗೂ ಮೆಡಿಕಲ್ ಶಾಪ್ ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ವಿಜಯಪುರ ಕ್ರಾಸ್ ಬಳಿಯಿರುವ ಓಂ ಬೇಕರಿ, ಮೇಡಿಕಲ್ ಶಾಪ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಎರಡೂ ಅಂಗಡಿಗಳು ಹೊತ್ತಿ ಉರಿದಿವೆ. ಈ ವೇಳೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.