ಮೈಸೂರು: ಮನೆಯಲಿದ್ದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೇಲ್ಫಾವಣಿ ಸಂಪೂರ್ಣ ಹಾಳಾಗಿರುವ ಘಟನೆ ನಡೆದಿದೆ.
ಮನೆಯಲ್ಲಿದ್ದ ಅತ್ತೆ -ಸೊಸೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಣಸೂರು ತಾಲೂಕಿನ ವಡ್ಡರ ಗುಡಿಯಲ್ಲಿ ಈ ಘಟನೆ ನಡೆದಿದೆ. ಅತ್ತೆ ಈರಮ್ಮ, ಸೊಸೆ ಶಾಂತಲ ಪ್ರಾಣಾಪಾಯದಿಂದ ಪಾರಾಗಿದ್ದು, ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಆಶಾ ಕಾರ್ಯಕರ್ತೆ ಶಾಂತಲ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ.
ಘಟನೆಯಲ್ಲಿ 20 ಲಕ್ಷ ರೂ. ಗೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.