ಕೊಪ್ಪಳ: ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ನದಿಗೆ ಬಿಡುತ್ತಿರುವ ಹಿನ್ನೆಲೆಯಲ್ಲಿ ರೈತರು ಸಂಕಷ್ಟ ಪಡುವಂತಾಗಿದೆ.
ತುಂಗಭದ್ರಾ ಜಲಾಶಯದ ಮೂಲಕ 62969 ಸಾವಿರ ಕ್ಯೂಸೆಕ್ ನೀರನ್ನು ಅಧಿಕಾರಿಗಳು ಬಿಡುಗಡೆ ಮಾಡಲಾಗಿದೆ. ನೀರು ಬಿಡುಗಡೆಯಿಂದಾಗಿ ಐತಿಹಾಸಿಕ ಸ್ಮಾರಕಗಳು ಮುಳುಗಡೆಯಾಗಿವೆ. ವಿಜಯನಗರ ಸಾಮ್ರಾಜ್ಯದ ಸಾಮ್ರಾಟ ಶ್ರೀಕೃಷ್ಣದೇವರಾಯ ಸಮಾಧಿ ಮಂಟಪ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಗಂಗಾವತಿ ತಾಲೂಕಿನ ಆನೆಗೊಂದಿ ಬಳಿ ಇರುವ ಸಮಾಧಿ ಸಂಪೂರ್ಣವಾಗಿ ಮುಳುಗಡೆಯಾಗಿದೆ.
ನದಿಗೆ ನೀರನ್ನು ಬಿಟ್ಟಿದ್ದರಿಂದಾಗಿ ನದಿ ಪಾತ್ರದ ರೈತರು ಸಂಕಷ್ಟ ಪಡುವಂತಾಗಿದೆ. ನೀರಿನ ರಭಸಕ್ಕೆ ರೈತರ ಪಂಪ್ ಸೆಟ್ ಗಳು ಕೊಚ್ಚಿ ಹೋಗುತ್ತಿವೆ. ಕೃಷಿಗಾಗಿ ನದಿಯಲ್ಲಿ ಹಾಕಿದ್ದ ಮೋಟಾರ್ ಪಂಪ್ ಸೆಟ್ ಗಳು, ಪೈಪ್ ಗಳು ಕೊಚ್ಚಿ ಹೋಗುತ್ತಿದ್ದು ರೈತರು ಸಂಕಷ್ಟ ಪಡುವಂತಾಗಿದೆ.