ಕೊಪ್ಪಳ: ಪಠ್ಯದಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿಗೆ ಆಗ್ರಹಿಸಿ ಕೊಪ್ಪಳದಲ್ಲಿ ಕರವೇ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಸಲಾಯಿತು.
ಕೊಪ್ಪಳದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿ, ಭಾಷಾ ಅಲ್ಪಸಂಖ್ಯಾತರನ್ನು ರಾಷ್ಟ್ರೀಯ ಪಕ್ಷಗಳು ಓಲೈಸುತ್ತಿವೆ. ರಾಜ್ಯದಲ್ಲಿ ತ್ರಿಭಾಷಾ ಶಿಕ್ಷಣ ಬೇಡ. ದ್ವಿಭಾಷಾ ಶಿಕ್ಷಣ ನೀತಿ ಜಾರಿಗೆ ತನ್ನಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.