ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ (DRDO Recruitment 2025) ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. DRDOದ ಡಿಫೆನ್ಸ್ ಬಯೋ ಎಂಜಿನಿಯರಿಂಗ್ & ಎಲೆಕ್ಟ್ರೋಮೆಡಿಕಲ್ ಲ್ಯಾಬೊರೇಟರಿಯಲ್ಲಿ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ.
ಜುಲೈ 1ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 17 ಕೊನೆಯ ದಿನವಾಗಿದೆ. ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ BE/ B.Tech , ME/ M.Tech ಪೂರ್ಣಗೊಳಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 06-07-2025 ರಂತೆ 28 ವರ್ಷಗಳನ್ನು ಹೊಂದಿರಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂ. ವೇತನ ನೀಡಲಾಗುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿಗಳನ್ನು ಸಲ್ಲಿಸಿದ ಬಳಿಕ, ಅವುಗಳನ್ನು ಪರಿಶೀಲನೆ ಮಾಡಿ, ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು https://www.drdo.gov.in/drdo/ ಗೆ ಭೇಟಿ ನೀಡಿ, ಅಧಿಸೂಚನೆಯನ್ನು ಓದಬೇಕು. ಬಳಿಕ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು, ಅದನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ Office of the Deputy Director, Women and Child Development Department, Yadgir, Room No.: C-17, First Floor, District Administration Building Complex, Chittapur Road, Yadgir – 585202 ವಿಳಾಸಕ್ಕೆ ಕಳುಹಿಸಬೇಕು.



















