ಶಿವಮೊಗ್ಗ : ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿನ ಗಣಪತಿ ಹಾಗೂ ನಾಗರ ಮೂರ್ತಿಯನ್ನು ಕಾಲಿಂದ ಒದ್ದು ಕೆಡವಿದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಘಟನಾ ಸ್ಥಳಕ್ಕೆ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಾಸಕರು ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು. ಈ ಹೇಯ ಕೃತ್ಯಕ್ಕೆ ಶಾಸಕರು ಆಕ್ರೋಶ ಹೊರಹಾಕಿದರು. ಅನ್ಯಕೋಮಿನ ವ್ಯಕ್ತಿಯ ಕುಮ್ಮಕ್ಕಿನಿಂದ ಈ ಕೃತ್ಯ ನಡೆದಿದೆ ಎಂದು ಆರೋಪಿಸಿದ ಸ್ಥಳೀಯರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಘಟನೆಯನ್ನು ತೀವ್ರವಾಗಿ ಖಂಡಿಸಿದ ಶಾಸಕರು, ಘಟನೆಗೆ ಕಾರಣವಾದ ವ್ಯಕ್ತಿಯ ವಿರುದ್ಧ ಶೀಘ್ರ ಕ್ರಮ ವಹಿಸುವಂತೆ ಆಗ್ರಹಿಸಿದ್ದಲ್ಲದ್ದಲೇ, ನೀವು ಕಾನೂನು ಕ್ರಮ ತೆಗೆದುಕೊಳ್ಳದಿದ್ದರೆ ನಾವೇ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ನಾಳೆ ಬೆಳಗ್ಗೆಯೊಳಗೆ ತಪ್ಪಿತಸ್ಥರು ಅರೆಸ್ಟ್ ಅಗಬೇಕು. ಶೀಘ್ರವೇ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಡಿಎಸ್ಪಿ ಸಂಜೀವ್ ಕುಮಾರ್ ಅವರಿಗೆ ಸೂಚಿಸಿದರು. ಶಾಸಕರ ಮಾತಿಗೆ ಬಜರಂಗದಳದ ಮುಖಂಡ ದೀನ ದಯಾಳು ಕೂಡ ದನಿಗೂಡಿಸಿದರು.



















