ಅವರಿಗೆ ಹುಟ್ಟು ಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಇಂದು ಶುಭಾಷಯಗಳ ಮಹಾಪೂರವೇ ಹರಿದು ಬಂದಿದೆ. ಇದರ ಜೊತೆಗೆ ಇದೀಗ, ಕಾಂತಾರ ಚಾಪ್ಟರ್ 1 ಕಡೆಯಿಂದ ದೊಡ್ಡ ಅಪ್ಡೇಟೇ ಸಿಕ್ಕಿದೆ.
ಕಾಂತಾರ ಚಾಪ್ಟರ್ 1 ಚಿತ್ರದ ಸೆಟ್ ನಲ್ಲಿ ಈಗಾಗಲೇ ಸಾಕಷ್ಟ ಅವಘಡಗಳು ಸಂಭವಿಸಿವೆ. ಈ ಕಾರಣದಿಂದ ಸಿನಿಮಾ ರಿಲೀಸ್ ವಿಳಂಬ ಆಗಲಿದೆ ಎಂದು ಹೇಳಲಾಗುತ್ತಿತ್ತು. ಇದೀಗ ಅಕ್ಟೋಬರ್ 2 ರಂದು ಗಾಂಧಿ ಜಯಂತಿಯ ದಿನ ಕಾಂತಾರ ಚಾಪ್ಟರ್ 1 ರಿಲೀಸ್ ಆಗಲಿದೆ ಎಂದು ಚಿತ್ರ ತಂಡ ತಿಳಿಸಿದೆ.
ಈಗಾಗಲೇ ರಿಲೀಸ್ ಆದ ಪೋಸ್ಟರ್ ನಲ್ಲಿ ರಿಷಬ್ ಶೆಟ್ಟಿ ಕೈಯಲ್ಲಿ ಕೊಡಲಿ ಹಾಗೂ ಗುರಾಣಿ ಹಿಡಿದಿದ್ದಾರೆ. ಗುರಾಣಿಗೆ ಬಾಣಗಳು ಚುಚ್ಚಿವೆ. ಹಿಂಭಾಗದಲ್ಲಿ ಬೆಂಕಿ ಇದೆ. ರಿಷಬ್ ಶೆಟ್ಟಿ ಮುಖದಲ್ಲಿ ಆಕ್ರೋಶದ ಜ್ವಾಲೆ ಕಾಣಿಸುತ್ತಿದೆ. ಈ ರೀತಿಯಲ್ಲಿ ಪೋಸ್ಟರ್ ಮೂಡಿ ಬಂದಿದೆ. ದಂತಕಥೆಯ ಮುನ್ನುಡಿ. ಆ ನುಡಿಗೊಂದು ಪರಿಚಯ. ಮನದಾಳದ ಕಥೆಗೆ ಮತ್ತೊಮ್ಮೆ ಸ್ವಾಗತ ಎಂದು ಪೋಸ್ಟರ್ನಲ್ಲಿ ಬರೆಯಲಾಗಿದೆ.



















