ಉಡುಪಿ : ದಾವಣಗೆರೆ ಮೂಲದ ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿಗೆ ಉಡುಪಿ ಜಿಲ್ಲೆಗೆ ಎರಡು ತಿಂಗಳು ಬಾರದಂತೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.
ಇಂದು ಸಂಜೆ 4ಕ್ಕೆ ಮಣಿಪಾಲದ ರಜತಾದ್ರಿಯಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿದ್ದವು. ಈ ಹಿನ್ನೆಲೆಯಲ್ಲಿ ರೌಡಿಶೀಟರ್ ಸತೀಶ್ ಪೂಜಾರಿ ಆಗಮಿಸಬಹುದು. ಒಂದು ವೇಳೆ ಸತೀಶ್ ಆಗಮಿಸಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಬಹುದು ಎಂಬ ಕಾರಣಕ್ಕೆ ಜಿಲ್ಲಾಧಿಕಾರಿ ಈ ನಿರ್ಣಯ ಕೈಗೊಂಡಿದ್ದಾರೆ. ಈ ಹಿಂದೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೌಡಿಶೀಟರ್ ಸತೀಶ್ ಉದ್ರಿಕ್ತ ಭಾಷಣ ಮಾಡಿದ್ದರು ಎನ್ನಲಾಗಿದೆ.