ಬೆಂಗಳೂರು: ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭವೃದ್ದಿ ಸಂಘ ಮತ್ತು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು ವತಿಯಿಂದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾ ಸ್ಥಳಕ್ಕೆ ಮುಖ್ಯ ಆಯುಕ್ತ ಮಹೇಶ್ವರರಾವ್, ವಿಶೇಷ ಆಯುಕ್ತ ಸುರಾಳ್ಕರ್ ವಿಕಾಸ್ ಕಿಶೋರ್, ಪೌರಾಡಳಿತ ಇಲಾಖೆ ನಿರ್ದೇಶಕ ಪ್ರಭುಲಿಂಗ ಕವಳಿಕಟ್ಟಿ ಆಗಮಿಸಿ, ಸಂಘಟನೆಯ ರಾಜ್ಯಾಧ್ಯಕ್ಷ ಎ.ಅಮೃತ್ ರಾಜ್ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮಾತನಾಡಿ ಅಧಿಕಾರಿ, ನೌಕರರ ಮೇಲೆ ಸಹನಾಭೂತಿ ಇರಬೇಕು. ಅವರ ಕಷ್ಟಗಳು ಕುರಿತು ನನಗೆ ಅರಿವಿದೆ. ಮುಂದಿನ ದಿನಗಳಲ್ಲಿ ಹೋರಾಟ ಮಾಡುವ ಅವಶ್ಯಕತೆ ಇಲ್ಲ. ಕುಳಿತು ಚರ್ಚೆ ಮಾಡಿ ಬಗೆಹರಿಸೋಣ, ಸಸ್ಪೆಂಡ್ ಅದ ನೌಕರರ ಕುರಿತು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತೇನೆ .ಸಂಘದವರು ಇಟ್ಟ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಸುರಾಳ್ಕರ್ ವಿಕಾಸ್ ಕಿಶೋರ್ ಮಾತನಾಡಿ, ವಿವಿಧ ಬೇಡಿಕೆಗಳ ಕುರಿತು ಪ್ರತಿಭಟನೆ ಮಾಡುತ್ತಿದ್ದಾರೆ ಬಿಬಿಎಂಪಿ ನೌಕರರ ಕುಂದುಕೂರತೆಗಳನ್ನು ನಿಭಾಯಿಸಬೇಕು. ಸಚಿವರು, ಮುಖ್ಯ ಆಯುಕ್ತರು ಇದರ ಕುರಿತು ಮಾಹಿತಿ ನೀಡಲಾಗುತ್ತದೆ. ನೌಕರರಿಗೆ ಸಹಾಯ ಮಾಡಬೇಕು ಎಂಬುವುದು ನಮ್ಮ ನಿಲುವು, ನೌಕರರಿಗೆ ಹುರದುಂಬಿಸಿ ಕೆಲಸ ಕಾರ್ಯ ಮಾಡಿಸುತ್ತೇವೆ. ಪ್ರಾಮಾಣಿಕ ಪ್ರಯತ್ನದಿಂದ ನ್ಯಾಯ ಕೊಡಿಸುತ್ತೇನೆ ಎಂದು ಹೇಳಿದರು.



















