ಮೈಸೂರು : ರಾಜ್ಯದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಿದ ಹಿನ್ನಲೆಯಲ್ಲಿ ಮೈಸೂರಿನ ಜಯದೇವಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದು, ಆಸ್ಪತ್ರೆಗಳಿಗೆ ತೆರಳಿ ಆಸ್ಪತ್ರೆಯಲ್ಲಿ ಬೆಳಿಗ್ಗೆಯಿಂದಲೇ ಕ್ಯೂ ನಲ್ಲಿ ಜನರು ನಿಂತ ದೃಶ್ಯಗಳು ಕಂಡು ಬರುತ್ತಿವೆ.
ಹೃದಯಾಘಾತದ ಭಯದಲ್ಲೇ ಆಸ್ಪತ್ರೆಗೆ ಬಂದು ಚಿಕಿತ್ಸೆಗೆ ತಮ್ಮನ್ನು ತಾವು ಒಳಪಡಿಸಿಕೊಳ್ಳುತ್ತಿದ್ದಾರೆ. ಪ್ರತಿನಿತ್ಯ ಹೊರಗಡೆ ಜಿಲ್ಲೆಗಳಿಂದ ಹೃದಯದ ನಾದವನ್ನು ಕೇಳಲೆಂದೇ 400 ರಿಂದ 500 ಜನ ಜಯದೇವ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.


















