ಬೆಂಗಳೂರು : ಕಾರ್ಮಿಕ ಸಂಘಟನೆಗಳು ಭಾರತದಾದ್ಯಂತ ಭಾರತ್ ಬಂದ್ ಗೆ ಕರೆ ನೀಡಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಟೌನ್ ಹಾಲ್ ಮುಂಬಾಗ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸದ್ಯ ಕಾರ್ಮಿಕ ಸಂಘಟನೆಗಳಿಗೆ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗಷ್ಟೆ ಪೊಲೀಸರು ಅನುಮತಿ ನೀಡಿದ್ದಾರೆ. ಆದಾಗ್ಯೂ ಟೌನ್ ಹಾಲ್ ಮುಂಭಾಗದಲ್ಲಿ ಸಂಘಟನೆಗಳು ಜಾಮಯಿಸುವ ಸಾಧ್ಯತೆ ಇರುವುದರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.