ಉಡುಪಿ : ರಾಜ್ಯ ಕಾಂಗ್ರೆಸ್ ವಿಚಾರಕ್ಕೆ ಸಂಬಂಧಿಸಿದಂತೆ ಸಪ್ಟೆಂಬರ್ ಕ್ರಾಂತಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಸದ್ಯದಲ್ಲೇ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ವರದಿಗಾರರಿಗೆ ಪ್ರತಿಕ್ರಿಯಿಸಿದ ಸಂಸದ ಕೋಟ, ಅಧಿಕಾರಿಗಳು ಈಗಿನ ಮುಖ್ಯಮಂತ್ರಿಯ ಮಾನಸಿಕತೆಗೆ ಒಗ್ಗಿ ಹೋಗಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ದರೆ, ಜನಸಾಮಾನ್ಯರ ದೈನಂದಿನ ಬದುಕಿನ ಮೇಲೆ ಪರಿಣಾಮ ಬೀಳಲಿದೆ. ಹೀಗಾಗಿ ಕಾಂಗ್ರೆಸ್ ತನ್ನಲ್ಲಿರುವ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.



















