ದೈಹಿಕ ಪರೀಕ್ಷೆಯಲ್ಲಿ ಉತ್ತಿರ್ಣರಾಗಿ ಇಲಾಖೆಗೆ ಬಂದಿರುವ ಪೊಲೀಸರು, ಕರ್ತವ್ಯದಲ್ಲಿ ನಿರತರಾಗಿ ಆರೋಗ್ಯದ ಕಡೆ ಸರಿಯಾಗಿ ಗಮನ ಹರಿಸುತ್ತಿಲ್ಲ ಎನ್ನುವುದು ಎಲ್ಲರಿಗೂ ತಿಳಿದ ಸಂಗತಿ. ಹೀಗಾಗಿ ಕೆಲವರಲ್ಲಿ ಬೊಜ್ಜು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ.
ಈ ಅನಗತ್ಯ ಬೊಜ್ಜು ಪೊಲೀಸ್ ಇಲಾಖೆಗೆ ಸರಿಯಾದುದಲ್ಲ. ಇದರಿಂದಾಗಿ ಇಲಾಖೆಗೆ ತೊಂದರೆಯಾಗಲಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಬೊಜ್ಜು ಕರಗಿಸಿಕೊಳ್ಳಲು ಮುಂದಾಗಬೇಕು ಎಂದು ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ. ಬೊಜ್ಜು ಕರಗಿಸಲು ಶಿಬಿರದತ್ತ ಮೊರೆ ಹೋಗಲು ಉಡುಪಿ ಜಿಲ್ಲಾ ಎಸ್ಪಿ ಹರಿರಾಮ್ ಶಂಕರ್ ನಿರ್ಧರಿಸಿದ್ದಾರೆ.
ಜಿಲ್ಲೆಯಲ್ಲಿನ 71 ಮಂದಿ ಪೊಲೀಸರನ್ನು 30 ದಿನಗಳ ನವಚೇತನ ಶಿಬಿರಕ್ಕಾಗಿ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಿಸಲಾಗಿದೆ.



















