ಬೈಂದೂರು : ಸಿದ್ದಾಪುರ – ಹುಲಿಕಲ್ ರಸ್ತೆ ಅಭಿವೃದ್ಧಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮನವಿ ಮಾಡಿದ್ದಾರೆ. ರಸ್ತೆ ಅಭಿವೃದ್ಧಿ ಮಾಡುವಂತೆ ಲೋಕೋಪಯೋಗಿ ಇಲಾಖೆ ಸಚಿವರಿಗೆ ಮನವಿ ಮಾಡಿದ್ದಾರೆ.
ಬೈಂದೂರು ಕ್ಷೇತ್ರ ವ್ಯಾಪ್ತಿಯ ತೀರ್ಥಹಳ್ಳಿ – ಕುಂದಾಪುರ ರಾಜ್ಯ ರಸ್ತೆಯು ಶಿವಮೊಗ್ಗ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ವಾಹನ ದಟ್ಟಣೆ ಈ ರಸ್ತೆಯಲ್ಲಿರುತ್ತದೆ. ಹೀಗಾಗಿ ಬಾಳೆಬರೆ ಘಟ್ಟ ಪ್ರದೇಶ ಮತ್ತು ಹೊಸಂಗಡಿ – ಸಿದ್ದಾಪುರದವರೆಗಿನ ರಸ್ತೆಯನ್ನು ಅಭಿವೃದ್ಧಿ ಮಾಡುವಂತೆ ಮನವಿ ಮಾಡಿದ್ದಾರೆ.
ಹುಲಿಕಲ್ ಘಾಟ್ ರಸ್ತೆ ಅಭಿವೃದ್ಧಿಗೆ ರೂ. 39.50 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿದ್ದಾರೆ.