ಬಿಜೆಪಿಯವರು ಮೊದಲಿನಿಂದಲೂ ಭವಿಷ್ಯ ಹೇಳುತ್ತಲೇ ಬಂದಿದ್ದಾರೆ. ನಮಗೂ ಪ್ರಧಾನಿ ನರೇಂದ್ರ ಮೋದಿಯವರ ಭವಿಷ್ಯ ಗೊತ್ತಿದೆ. ನರೇಂದ್ರ ಮೋದಿ ಐದು ವರ್ಷಗಳ ಕಾಲ ಪ್ರಧಾನಿಯಾಗಿ ಇರಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ವರದಿಗಾರರಿಗೆ ಪ್ರತಿಕ್ರಿಯಿಸಿದ ಸಂತೋಷ್, ಬಿಜೆಪಿ ಒಳಗೆಯೇ ಕಿತ್ತಾಟವಿದೆ. ಚಂದ್ರಬಾಬು ನಾಯ್ಡು ನೂರು, ಇನ್ನೂರು ರೂ. ನೋಟು ಪ್ರಿಂಟ್ ಮಾಡುತ್ತಿದ್ದಾರೆ. ಎರಡು ಸಾವಿರ ರೂಪಾಯಿ ನೋಟು ಮಾರುಕಟ್ಟೆಯಲ್ಲಿ ಸಿಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. ದಯವಿಟ್ಟು ಇಂತಹ ಭವಿಷ್ಯದ ಬಗ್ಗೆ ಮಾತನಾಡಬೇಡಿ ಎಂದು ಲಾಡ್ ಬಿಜೆಪಿಗೆ ಮನವಿ ಮಾಡಿದ್ದಾರೆ.
ಮೋದಿ ಸರ್ಕಾರದಲ್ಲಿ ಫಾರಿನ್ ಪಾಲಿಸಿ ಸಂಪೂರ್ಣ ವಿಫಲವಾಗಿದೆ. ಮೊದಲು ಅವರು ಅದನ್ನು ಸರಿಪಡಿಸಲಿ. ನಮ್ಮ ಸರ್ಕಾರದಲ್ಲಿ ಸಿಎಂ ಬದಲಾವಣೆ ಆಗುತ್ತದೆ ಎಂದು ಭವಿಷ್ಯ ನುಡಿಯುವುದು ಬೇಡ ಎಂದು ಹೇಳಿದ್ದಾರೆ.