ನವದೆಹಲಿ : ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ರಾಜಧಾನಿ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ಸಾಧ್ಯತೆ ಇದೆ ಎನ್ನುವ ಊಹಾಪೋಹಗಳು ಎದ್ದಿರುವ ಸಂದರ್ಭದಲ್ಲೇ ಸಿದ್ದರಾಮಯ್ಯ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ನಿನ್ನೆ, ನಾನೇ ಐದು ವರ್ಷ ಸಿಎಂ ಎಂಬ ಹೇಳಿಕೆಯನ್ನು ನೀಡುವುದರ ಮೂಲಕ ಸಿದ್ದರಾಮಯ್ಯ ಸಿಎಂ ಬದಲಾವಣೆಯ ಬಗ್ಗೆ ಇರುವ ಗೊಂದಲಗಳಿಗೆ ತೆರೆ ಎಳೆದಿದ್ದರು. ಆದರೆ, ಇಂದು ಖರ್ಗೆ ಅವರನ್ನು ಸಿದ್ದರಾಮಯ್ಯ ಭೇಟಿ ನೀಡಿದ್ದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
ಸಿಎಂ ಸಿದ್ದರಾಮಯ್ಯ ಅವರನ್ನು ತಮ್ಮ ಕಚೇರಿಗೆ ಕರೆಯಿಸಿ ಖರ್ಗೆ ಮಾತನಾಡಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಯಾವುದೇ ಹೇಳಿಕೆ ನೀಡದಂತೆ ಖರ್ಗೆ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.



















