ಮೂಲ್ಕಿ: ಹುಟ್ಟು ಹಬ್ಬ ಆಚರಣೆ ನೆಪದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಕರೆದೊಯ್ದ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರು ಸಹಿತ ಐವರು ಅತ್ಯಾಚಾರ ಎಸಗಿರುವ ಆರೋಪವೊಂದು ಕೇಳಿ ಬಂದಿದೆ.
ಈ ಕುರಿತು ಸಂತ್ರಸ್ತ ಬಾಲಕಿಯ ತಾಯಿ ಮೂಲ್ಕಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಅಮಾನವೀಯ ಕೃತ್ಯವನ್ನು ಸಾರ್ವಜನಿಕರು ಖಂಡಿಸಿದ್ದು, ಆರೋಪಿಗಳ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.